ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸ್ತ್ರೀಯ ಸ್ಥಾನಮಾನ; ಕರವೇ ಪ್ರತಿಭಟನೆ

By Staff
|
Google Oneindia Kannada News

ಬೆಂಗಳೂರು, ಅ. 23 : ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರದಲ್ಲಿ ರೈಲು ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಇದೇ ನವೆಂಬರ್ ತಿಂಗಳೊಳಗೆ ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡದಿದ್ದರೆ ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳನ್ನು ಧ್ವಂಸಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಮಸ್ತ ಕನ್ನಡಿಗರಿಗೆ ಬಹುದಿನದ ಏಕೈಕ ಕನಸು ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಗೌರವ ದೊರೆಯಬೇಕು ಎನ್ನುವುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಭಾರಿ ಪ್ರತಿಭಟನೆ ನಡೆಸಿ ಎಚ್ಚರಿಸಲಾಗಿದೆ. ಆದರೂ ಕೂಡಾ ಯುಪಿಎ ಸರ್ಕಾರ ವಿನಾಕಾರಣ ಕಾಲಹರಣ ಮಾಡುತ್ತಿದೆ. ಕನ್ನಡಿಗರ ಸಹನೆಯನ್ನು ಕೇಂದ್ರ ಪರೀಕ್ಷೆ ಮಾಡುತ್ತಿದೆ ಎಂದು ಕಿಡಿ ಕಾರಿದ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಶೀಘ್ರದಲ್ಲಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಘೋಷಿಸಿದ್ದರೆ ರಾಜ್ಯದಲ್ಲಿರುವ ಕೇಂದ್ರ ಸರ್ಕಾರ ಕಚೇರಿಗಳನ್ನು ಧ್ವಂಸ ಮಾಡುವುದು ಎಚ್ಚರಿಕೆ ನೀಡಿದರು. ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಅದರೊಳಗೆ ಕನ್ನಡ ಸಿಗಬೇಕಾದ ಗೌರವವನ್ನು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ ಪ್ರತಿಭಟನಾ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು ಕೇಂದ್ರದ ಮಲತಾಯಿ ಧೋರಣೆಯನ್ನು ಖಂಡಿಸಿದರು. ಯುಪಿಎ ಸರ್ಕಾರ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಕೈಗೊಂಬೆಯಾಗಿದೆ ಎಂದು ಟೀಕಿಸಿದರು. ತಮಿಳುನಾಡು ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿದರೆ, ಮುಂಬರುವ ದಿನಗಳಲ್ಲಿ ತಕ್ಕ ಬೆಲೆ ತೆರೆಬೇಕಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆಯ ರಾಯಚೂರು ಘಟಕವು ಇಂದು ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೆಲವರಿಗೆ ಹಲ್ಲೆ ನಡೆದ ಘಟನೆ ಜರುಗಿದೆ. ರಾಜ್ಯಾದ್ಯಂತ ಸಂಘಟಿತವಾಗಿ ಹೋರಾಟ ಮುಂದುವರೆಸಲಾಗುವುದು ಎಂದು ಕಾರ್ಯಕರ್ತರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಕರವೇ ಕರಾಮತ್ತು : ನಕಲಿ ಪಡಿತರಚೀಟಿ ಜಾಲ ಬಯಲು
ಮಣಿದ ನೋಕಿಯಾ : ಸೋನಿ ಕುಟುಂಬಕ್ಕೆ ಪರಿಹಾರ
ಶಾಸ್ತ್ರೀಯ ಸ್ಥಾನಮಾನ : ಕರವೇ ಹೋರಾಟ ಜಾರಿ
ಕರವೇದಾಳಿಗೆ ದಾಳಿಗೆ ಸಿಕ್ಕ ವೀಕೆಂಡ್ ಗಾಂಜಾ ಪಾರ್ಟಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X