ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಜರಂಗಿ ಮಹೇಂದ್ರನಿಗೆ ಷರತ್ತುಬದ್ಧ ಜಾಮೀನು

By Staff
|
Google Oneindia Kannada News

ಬೆಂಗಳೂರು, ಅ. 24 : ಚರ್ಚ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಅವರಿಗೆ ಹೈಕೋರ್ಟ್ ಎರಡು ಲಕ್ಷ ರುಪಾಯಿಗಳ ಬಾಂಡ್ ಹಾಗೂ ಇಬ್ಬರು ವ್ಯಕ್ತಿಗಳ ಶೂರಿಟಿ ಪಡೆದುಕೊಂಡು ಷರತ್ತುಬದ್ಧ ಜಾಮೀನು ನೀಡಿದೆ. ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಬರವಂತಹ ಯಾವ ಹೇಳಿಕೆಯನ್ನೂ ನೀಡಕೂಡದು ಎಂದು ನ್ಯಾಯಾಲಯ ಮಹೇಂದ್ರಕುಮಾರ್ ಗೆ ತಾಕೀತು ಮಾಡಿದೆ.

ಮಂಗಳೂರಿನಲ್ಲಿ ಕ್ರಿಶ್ಚಿಯನ್ನರು ಮತಾಂತರ ನಡೆಸುತ್ತಾರೆ ಎಂದು ಆರೋಪಿಸಿ ಭಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಮಹೇಂದ್ರಕುಮಾರ್ ನೇತೃತ್ವದಲ್ಲಿ ಚರ್ಚ್ ಮೇಲೆ ದಾಳಿ ನಡೆಸಿ ಪೀಠೋಪಕರಣ ನಾಶ ಮಾಡಲಾಗಿತ್ತು. ಇದರೊಂದಿಗೆ ಮಂಗಳೂರಿನಲ್ಲಿರುವ ಅನೇಕ ಚರ್ಚ್ ಗಳ ಮೇಲೆ ದಾಳಿ ನಡೆಯಿತು. ದಾಳಿಯನ್ನು ಸಮರ್ಥಿಸಿಕೊಂಡಿದ್ದ ಮಹೇಂದ್ರಕುಮಾರ್ ವಾಹಿನಿಯೊಂದಕ್ಕೆ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ರಾಜ್ಯ ತುಂಬೆಲ್ಲಾ ಚರ್ಚ್ ದಾಳಿಗಳು ಅವ್ಯಾಹತವಾಗಿ ನಡೆಯತೊಡಗುತ್ತಿದ್ದಂತೆಯೇ ಮಹೇಂದ್ರ ಕುಮಾರ ಮೇಲೆ ಮಂಗಳೂರು ಹಾಗೂ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಗಲಭೆ, ದೊಂಬಿ ಪ್ರಕರಣಗಳ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿತ್ತು.

ಬಂಧನದ ನಂತರ ಚಿಕ್ಕಮಗಳೂರಿನ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಮಹೇಂದ್ರಕುಮಾರ್ ಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಂದ್ರ ಕುಮಾರ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಮುಖ್ಯವಾಗಿ ಸಾರ್ವಜನಿಕವಾಗಿ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ಬಾರದಂತೆ ನಡೆದುಕೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡದೆ. ಎರಡು ಲಕ್ಷ ರುಪಾಯಿ ಬಾಂಡ್ ಹಾಗೂ ಇಬ್ಬರು ಪ್ರಭಾವಿ ವ್ಯಕ್ತಿಗಳ ಶೂರಿಟಿ ಪಡೆದಕೊಂಡ ನ್ಯಾಯಾಲಯ ಜಾಮೀನು ನೀಡಿದೆ.

(ದಟ್ಸ್ ಕನ್ನಡ ವಾರ್ತೆ)

ಭಜರಂಗಿ ಮಹೇಂದ್ರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ
ಚರ್ಚ್ ದಾಳಿ ಸೇರಿ 3 ಪ್ರಕರಣಗಳು ಸಿಓಡಿಗೆ
ಭಜರಂಗ ಮುಖಂಡ ಮಹೇಂದ್ರ ರಾಜೀನಾಮೆ
ಬಲವಂತ ಮತಾಂತರ ವಿರುದ್ಧ ಈಶ್ವರಪ್ಪ ಎಚ್ಚರಿಕೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X