ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿವಿ ರಾಮನ್ ನಗರದ ಮನೆಯಲ್ಲಿ ಸ್ಫೋಟ

By Staff
|
Google Oneindia Kannada News

ಬೆಂಗಳೂರು, ಅ. 24 : ನಗರದ ಸಿ.ವಿ ರಾಮನ್ ನಗರದ ಸುದ್ದಗುಂಟೆಪಾಳ್ಯದ ಮನೆಯೊಂದರಲ್ಲಿ ಇಂದು ಬೆಳಗಿನ ಜಾವ ನಿಗೂಢ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ದಂಪತಿಗಳಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ. ಸ್ಫೋಟದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ದೇಶದ ವಿವಿಧೆಡೆ ಬಾಂಬ್ ಸ್ಫೋಟಗಳ ಹಾವಳಿ ಹೆಚ್ಚುತ್ತಿರುವ ಬೆನ್ನಲ್ಲೇ ಇಂದು ನಗರದ ಮನೆಯೊಂದರಲ್ಲಿ ನಿಗೂಢ ಸ್ಫೋಟವಾಗಿರುವುದು ಜನರನ್ನು ತಲ್ಲಣಗೊಳಿಸಿದೆ.

ಸುದ್ದಗಂಟೆಪಾಳ್ಯದ ಶಿವಣ್ಣ ಮತ್ತು ಮೀನಾ ದಂಪತಿಗಳ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ದಂಪತಿಗಳು ತೀವ್ರವಾಗಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಸಿರುವ ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿದೆ. ಸ್ಫೋಟದ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಿಲ್ಲ. ನಿಗೂಢ ಸ್ಫೋಟವಾಗಿರುವುದು ಸತ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಆರಂಭವಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X