ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಸಾಧನೆಯೇ ಅರ್ಹತೆ

ಬೆಂಗಳೂರು, ಅ.24: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 65 ಮಂದಿಯ ತಾತ್ಕಾಲಿಕ ಪಟ್ಟಿಯನ್ನು ಮುಖ್ಯಮಂತ್ರಿ ನೇತೃತ್ವದ ಆಯ್ಕೆ ಸಮಿತಿ ಸಿದ್ಧಪಡಿಸಿದೆ. ನ.1ರಂದು ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಕಾಂಕ್ಷಿಗಳ ಸಂಖ್ಯೆ 1500ರ ಗಡಿ ದಾಟಿತ್ತು. ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಕೇವಲ 60 ಮಂದಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇನ್ನೆರಡು ದಿನಗಳಲ್ಲಿ ಪ್ರಶಸ್ತಿ ಪಟ್ಟಿ ಅಂತಿಮವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಶಸ್ತಿಗೆ ಆಯ್ಕೆ ಮಾಡುವಾಗ ಜಿಲ್ಲಾ ಮತ್ತು ವರ್ಗವಾರು ಆದ್ಯತೆ ನೀಡಲಾಗುತ್ತದೆ. ಆಯ್ಕೆಗೆ ಮಾನದಂಡ ಏನು ಎಂಬ ಬಗ್ಗೆ ಉತ್ತ್ತರಿಸಿದ ಮುಖ್ಯಮಂತ್ರಿಗಳು, ಸಾಧಕರ ಸಾಧನೆಯೇ ಮಾನದಂಡ ಎಂದರು. ಸಭೆಯಲ್ಲಿ ಸಚಿವರಾದ ಡಾ.ವಿ.ಎಸ್.ಆಚಾರ್ಯ, ಶೋಭಾ ಕರಂದ್ಲಾಜೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮುಖ್ಯಮಂತ್ರಿ ಚಂದ್ರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+