ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ

ಬೆಂಗಳೂರು, ಅ. 31 : ಮೆರಾಜುದ್ದೀನ್ ಪಟೇಲ್ ನಿಧನದ ನಂತರ ಖಾಲಿಯಾಗಿದ್ದ ಉತ್ತರಾಧಿಕಾರಿ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಲ್ಲ ಮುಖಂಡರ ಅನುಮತಿ ಮೇರೆಗೆ ಸರ್ವಾನುಮತದಿಂದ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಆರಿಸಲಾಯಿತು ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಿ.ನಾರಾಯಣಸ್ವಾಮಿ, ಮಾಜಿ ಸಚಿವ ಬಸವರಾಜ ಹೊರಟ್ಟಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ಹೃದಯಾಘಾತದಿಂದ ನಿಧನದ ನಂತರ ನೂತನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತೀವ್ರ ಶೋಧ ನಡೆದಿತ್ತು. ಇಂದು ಪಕ್ಷದ ಕಚೇರಿಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ನವೆಂಬರ್ 10 ರಂದು ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಲಿದ್ದಾರೆ ಎಂದು ಹೊರಟ್ಟಿ ತಿಳಿಸಿದರು.

ಪ್ರಭಾವಿ ನಾಯಕ ರಾಜ್ಯಾಧ್ಯಕ್ಷರಾಗುವುದು ಸೂಕ್ತವಾಗಿತ್ತು. ಏಕೆಂದರೆ ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಹಾಗೂ ಉಪಚುನಾವಣೆ ಇರುವುದರಿಂದ ಕುಮಾರಸ್ವಾಮಿ ಅಧ್ಯಕ್ಷರಾಗುವುದು ಉತ್ತಮ ಎಂದು ಸಭೆಯಲ್ಲಿ ಒಕ್ಕೂರಲ ಅಭಿಪ್ರಾಯ ಹೊರಹೊಮ್ಮಿತು ಎಂದು ಹೊರಟ್ಟಿ ಹೇಳಿದರು. ಅಧಿಕಾರ ಸ್ವೀಕಾರದ ನಂತರ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಪಕ್ಷದ ಹೊಣೆ ಹೊತ್ತುಕೊಳ್ಳಲು ಯಾವ ನಾಯಕರು ಒಲವು ತೋರದ ಹಿನ್ನೆಲೆಯಲ್ಲಿ ಅಧ್ಯಕ್ಷ ಪಟ್ಟ ಯಾರಿಗೆ ದೊರೆಯಲಿದೆ ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳು ಪ್ರಸ್ತಾಪವಾದರೂ ದೇವೇಗೌಡರು ಕೊನೆಗೂ ಕುಮಾರಸ್ವಾಮಿಗೆ ಪಕ್ಷದ ಜವಾಬ್ದಾರಿ ನೀಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಬಸವರಾಜ ಹೊರಟ್ಟಿ, ಇಕ್ಬಾಲ್ ಅನ್ಸಾರಿ, ಚಲುವರಾಯಸ್ವಾಮಿ, ಸಿದ್ಧನಗೌಡ ಪಾಟೀಲ್ ಕಾರ್ಯಾಧ್ಯಕ್ಷ ಸಿ. ನಾರಾಯಣಸ್ವಾಮಿ ಅವರ ಹೆಸರುಗಳು ಕೇಳಿಬಂದಿದ್ದವು. ಅಲ್ಪಸಂಖ್ಯಾತರು, ಹಿಂದುಳಿದವರು, ವೀರಶೈವ ಅಭ್ಯರ್ಥಿಗಳನ್ನು ಅಧ್ಯಕ್ಷರನ್ನಾಗಿಸಿದರೆ ಉಪಚುನಾವಣೆ ಎದುರಿಸಲು ಸಾಧ್ಯ ಎನ್ನುವ ಆಲೋಚನೆ ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಕುಮಾರಸ್ವಾಮಿ ಅವರಿಗೆ ಪಟ್ಟ ಕಟ್ಟುವ ಮೂಲಕ ದೇವೇಗೌಡರು ಅಧಿಕಾರವನ್ನು ತಮ್ಮಲ್ಲೇ ಇಟ್ಟುಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಕನ್ನಡ ನೆಲಕ್ಕೆ ಮೋಸ ಮಾಡಬೇಡಿ: ಸದಾನಂದಗೌಡ
ಮೈತ್ರಿಯಿಂದ ಜೆಡಿಎಸ್ ಗೆ ಅಪಾಯ ಕಟ್ಟಿಟ್ಟ ಬುತ್ತಿ
ಕುರುಡ-ಕುಂಟರ ಮೈತ್ರಿ: ಬಿಜೆಪಿ ಲೇವಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+