ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಕೊಲೆ

By Staff
|
Google Oneindia Kannada News

ನ್ಯೂಯಾರ್ಕ್, ನ. 4 : ಕರ್ನಾಟಕ ಮೂಲದ ಸಾಫ್ಟವೇರ್ ಇಂಜಿನಿಯರೊಬ್ಬರು ನಿಗೂಢ ರೀತಿಯಲ್ಲಿ ಕೊಲೆಯಾಗಿರುವ ಘಟನೆ ಇಲ್ಲಿನ ಸಿಯಾಟ್ಲ್ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಗದಗ ಜಿಲ್ಲೆಯ ಅರ್ಪಣಾ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ಹೈದರಾಬಾದ್ ನಲ್ಲಿ ಪ್ರಾಧ್ಯಾಪಕರಾಗಿರುವ ಅರ್ಪಣಾ ತಂದೆಗೆ ಈ ವರೆಗೊ ಆಕೆಯ ಬಗ್ಗೆ ವಿವರವಾದ ಮಾಹಿತಿ ಸಿಕ್ಕಿಲ್ಲ. ಕಳೆದ ಶನಿವಾರ ಫೋನ್ ಕರೆ ಮಾಡಿದರೂ ಅತ್ತಲಿಂದ ಸ್ಪಷ್ಟವಾದ ಮಾಹಿತಿ ದೊರೆತಿಲ್ಲ ಎಂದು ಅವರು ತಿಳಿಸಿದ್ದಾರೆ. ಭಾರತೀಯ ಸಾಫ್ಟವೇರ್ ಇಂಜಿನಿಯರ್ ಅರ್ಪಣಾ ಎಂಬುವವರನ್ನು ಕೊಲೆ ಮಾಡಲಾಗಿದೆ. ಕತ್ತು ಸೀಳಿದ ಗುರುತುಗಳು ಆಕೆಯ ಶವದ ಮೇಲೆ ಸಿಕ್ಕಿವೆ.

ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ನಂತರ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಅಮೆರಿಕದ ಪೊಲೀಸರು ತಿಳಿಸಿದ್ದಾರೆ. ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸರ ಚಿತ್ತ ಅತ್ತ ನೆಟ್ಟಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿ ದೊರೆಯುವಲ್ಲಿ ವಿಳಂಬವಾಗಿದೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X