ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಾದ್ಯಂತ ಅನಿಯಮಿತ ಲೋಡ್ ಶೆಡ್ಡಿಂಗ್

By Staff
|
Google Oneindia Kannada News

ಬೆಂಗಳೂರು, ನ. 4 : ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗಿದೆ. ರಾಯಚೂರು ಶಾಖೋತ್ಪನ್ನ ಸ್ಥಾವರದ ಮೂರು ಘಟಕಗಳು ಹಾಗೂ ನಾಗ್ಝರಿಯ ಒಂದು ಘಟಕ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ವಿದ್ಯುತ್ ಸಮಸ್ಯೆ ತಲೆದೋರಿದೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 2 ಮತ್ತು 5ನೇ ಘಟಕಗಳು ದುರಸ್ತಿಯಲ್ಲಿವೆ. 3ನೇ ಘಟಕ ಹಾಗೂ ನಾಗ್ಝರಿಯ ಘಟಕವನ್ನು ನಿರ್ವಹಣೆ ಕಾರಣಕ್ಕಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದ ಒಟ್ಟು 775 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ತಲಾ 210 ಮೆಗಾವ್ಯಾಟ್ ಸಾಮರ್ಥ್ಯದ ಮೂರು ಘಟಕಗಳು ಸ್ಥಗಿತದಿಂದಾಗಿ ಆರ್ ಟಿಪಿಎಸ್ ನಿಂದ 630 ಮೆಗಾವ್ಯಾಟ್ ವಿದ್ಯುತ್ ಕಡಿಮೆಯಾಗಿದ್ದರೆ, ನಾಗ್ಝರಿ ಘಟಕದಿಂದ 145 ಮೆಗಾವ್ಯಾಟ್ ವಿದ್ಯುತ್ ಖೋತಾ ಆಗಿದೆ. ಅಷ್ಟೇ ಅಲ್ಲದೆ ಬಳ್ಳಾರಿ ಘಟಕದಲ್ಲೂ ನಿಗದಿತ ಪ್ರಮಾಣದಷ್ಟು ವಿದ್ಯುತ್ ಉತ್ಪಾದನೆಯಾಗದಿರುವುದು ಈ ಸಮಸ್ಯೆ ಉಲ್ಭಣಿಸಲು ಕಾರಣವಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X