ಆಶ್ರಯ ಫಲಾನುಭವಿಗಳಿಗೆ 2ಲಕ್ಷ ಮನೆಗಳು

ಬೆಂಗಳೂರು, ನ.5: ಆಶ್ರಯ ಯೋಜನೆಯಡಿ ಕರ್ನಾಟಕದ ಸರಕಾರಈ ವರ್ಷಾಂತ್ಯಕ್ಕೆ ಎರಡು ಲಕ್ಷ ಮನೆಗಳನ್ನು ವಿತರಿಸಲಿದೆ. 2013ರ ವೇಳೆಗೆ 13 ಲಕ್ಷ ಮನೆಗಳನ್ನು ಬಡವರಿಗೆ ವಿತರಿಸಲಾಗುತ್ತದೆ ಎಂದು ವಸತಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಇಂದು ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು, ಆಶ್ರಯ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ಈ ತಿಂಗಳಾಂತ್ಯಕ್ಕೆ ಸರ್ಕಾರಕ್ಕೆ ಕಳುಹಿಸುವಂತೆ ಎಲ್ಲಾ ಪಂಚಾಯಿತಿ ಕಾರ್ಯದರ್ಶಿಗಳಿಗೆ ನಿರ್ದೇಶಿಸಲಾಗಿದೆ. ಆಶ್ರಯ ಯೋಜನೆಯ ಫಲಾನುಭವಿಗಳನ್ನು ಗುರುತಿಸಲು ಈಗಿರುವ ಆಯ್ಕೆ ಪದ್ಧತಿಯಿಂದ ತಡವಾಗುತ್ತಿದೆ. ಹೊಸ ಪದ್ಧತಿಯನ್ನು ತರುವಂತೆ ಶಾಸಕರು ಒತ್ತಾಯಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಈ ಕುರಿತು ಮುಂದಿನ ವಿಧಾನ ಸಭೆ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುತ್ತದೆ. ಆಶ್ರಯ ಯೋಜನೆ ಫಲಾನುಭವಿಗಳ ಪಟ್ಟಿ ತಯಾರಿಸಲು ಹಾಲಿ ಶಾಸಕರು ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಸಚಿವರು, 2013ರ ವೇಳೆಗೆ 13 ಲಕ್ಷ ಬಡವರಿಗೆ ಮನೆಗಳನ್ನು ವಿತರಿಸಲಾಗುತ್ತದೆ ಎಂದರು.

ಅನಿವಾಸಿ ಭಾರತೀಯರ ಆರ್ಥಿಕ ನೆರವಿನೊಂದಿಗೆ ರಾಜ್ಯದ 50 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವರೂ ಆಗಿರುವ ಕೃಷ್ಣಯ್ಯ ಶೆಟ್ಟಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸಲು ಸರಕಾರ ರು.180 ಕೋಟಿ ವೆಚ್ಚ ಮಾಡಲಿದೆ. ಇದು ಮೂರು ಹಂತಗಳ ಯೋಜನೆಯಾಗಿದೆ ಎಂದು ಸಚಿವರು ವಿವರ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

ಕನ್ನಡ ಭಾಷೆಯ ಅಭಿವೃದ್ಧಿಗೆ ಕಂಕಣ ಬದ್ಧ
ಎರಡು ಹೊತ್ತಿನ ಊಟ ಮುಖ್ಯ:ಯಡ್ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+