ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ

By Staff
|
Google Oneindia Kannada News

ಬೆಂಗಳೂರು, ನ. 7 : ಇದೇ ತಿಂಗಳು 14 ರಿಂದ ಕೃಷಿ ಪಂಪ್ ಸೆಟ್ ಗಳಿಗೆ ನಿರಂತರ ಆರು ಗಂಟೆ ಗುಣಮಟ್ಟದ ವಿದ್ಯುತ್ ಪೂರೈಸಲು ಸರ್ಕಾರ ನಿರ್ಧರಿಸಿದೆ. ಜೊತೆಗೆ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಹೇರಲಾಗಿರುವ ಲೋಡ್ ಶೆಡ್ಡಿಂಗ್ ರದ್ದುಗೊಳಿಸಲು ತೀರ್ಮಾನಿಸಲಾಗಿದೆ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ನೈತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ದಾರ ಕೈಗೊಳ್ಳಲಾಗಿದೆ. ನ.14 ರಿಂದ ಇದು ಜಾರಿಗೆ ಬರಲಿದೆ. ಹಳ್ಳಿಗಳಲ್ಲಿ ತ್ರಿ-ಫೇಸ್ ಮತ್ತು ಸಿಂಗಲ್ ಫೇಸ್ ಗಳಲ್ಲಿ ಪ್ರತಿ ದಿನ 6 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಸಲಾಗುವುದು. ಅಲ್ಲದೆ ಬೆಂಗಳೂರು ಸೇರಿ ನಗರ, ಪಟ್ಟಣ ಪ್ರದೇಶಗಳಲ್ಲಿರುವ ಲೋಡ್ ಶೆಡ್ಡಿಂಗ್ ತೆಗೆದು ಹಾಕಲಾಗುವುದು ಎಂದು ಸಂಪುಟ ಸಭೆಯ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಸರ್ಕಾರದ ನಿರ್ಧಾರಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ 100 ಕೋಟಿ ರುಪಾಯಿಗಳನ್ನು ನೀಡಲಾಗುತ್ತಿದೆ. ಬಾಕಿ ಹಣವನ್ನು 500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಹ ಸರ್ಕಾರ ಗಮನಹರಿಸಿದೆ. ಕರ್ನಾಟಕ ವಿದ್ಯುತ್ ನಿಗಮ, ಬಿಎಲ್ಇಎಲ್ ಸಹಭಾಗಿತ್ವದಲ್ಲಿ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು. (ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X