ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಒಬಾಮ ಬೇಕಿಲ್ಲ

By Staff
|
Google Oneindia Kannada News

ನವದೆಹಲಿ, ನ. 10 : ಭಾರತ-ಪಾಕಿಸ್ತಾನದ ನಡುವೆ ಉಂಟಾಗಿರುವ ಕಾಶ್ಮೀರ ವಿವಾದವನ್ನು ಉಭಯ ರಾಷ್ಟ್ರಗಳ ಮುಖಂಡರು ಮಾತುಕತೆ ಮೂಲಕ ಬಗೆಹರಿಸುಕೊಳ್ಳತ್ತೇವೆ. ಈ ವಿಷಯದಲ್ಲಿ ಮೂರನೇ ವ್ಯಕ್ತಿ ಪ್ರವೇಶವನ್ನು ಭಾರತ ಸ್ಪಷ್ಟವಾಗಿ ನಿರಾಕರಿಸಲಿದೆ ಎಂದು ಕೇಂದ್ರದ ವಿದೇಶಾಂಗ ಸಚಿವ ಪ್ರಣವ್ ಮುಖರ್ಜಿ ಖಡಾಖಂಡಿತವಾಗಿ ಹೇಳುವ ಮೂಲಕ ಅಮೆರಿಕ ನೂತನ ಅಧ್ಯಕ್ಷ ಬರಾಕ್ ಒಬಾಮಾಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ವಿಷಯದಲ್ಲಿ ನಾವು ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ. ಶೀಘ್ರದಲ್ಲಿ ಈ ಸಮಸ್ಯೆ ಸುಖಾಂತ್ಯ ಕಾಣಲಿದೆ ಎಂದರು. ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾರತ-ಪಾಕಿಸ್ತಾನದ ದೇಶಗಳ ನಡುವೆ ವೈಮನಸ್ಸಿಗೆ ಕಾರಣವಾಗಿರುವ ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಪಡಿಸುವ ಮಾತನಾಡಿದ್ದರು.

ಉಭಯ ದೇಶಗಳಲ್ಲಿ ಶಾಂತಿ ನೆಲೆಸಲು ಅಮೆರಿಕ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿ ಶೀಘ್ರದಲ್ಲಿ ಆ ಸ್ಥಳದಲ್ಲಿ ಶಾಂತಿ ನೆಲೆಸುವಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಒಬಾಮಾ ನೀಡಿದ ಹೇಳಿಕೆ ಇಂದು ಪ್ರವಣ್ ಮುಖರ್ಜಿ ಪ್ರತಿಕ್ರಿಯೆ ನೀಡಿದರು.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಅದನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಭಾರತ ಈ ವಿವಾದವನ್ನು ಗಂಭೀರ ಸಮಸ್ಯೆ ಎಂದು ಪರಿಗಣಿಸಿಯೇ ಇಲ್ಲ. ಭಾರತಕ್ಕೆ ಸಾಕಷ್ಟು ತಲೆ ನೋವಾಗಿರುವ ಇದರ ಪರಿಹಾರಕ್ಕೆ ಭಾರತ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸಿದೆ, ಸಿಮ್ಲಾ ಮಾತುಕತೆ, ಲಾಹೋರ್ ಮಾತುಕತೆ ಹೀಗೆ ಅನೇಕ ಪ್ರಯತ್ನಗಳು ಸಾಗಿವೆ. ಹೀಗಾಗಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸಕೊಳ್ಳುವ ವಿಶ್ವಾಸವಿದೆ. ಇದರಲ್ಲಿ ಯಾರೂ ಭಾಗವಹಿಸುವ ಅಗತ್ಯವಿಲ್ಲ ಎಂದು ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟವಾದ ಸಂದೇಶ ರವಾನಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X