ಟೀಮ್ ಇಂಡಿಯಾದ ಪಾಕ್ ಪ್ರವಾಸ ರದ್ದು

ನವದೆಹಲಿ, ನ, 11 : ಭಯೋತ್ಪಾದಕರ ವಿಧ್ವಂಸಕ ಕೃತ್ಯದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ 2009ರ ಜನವರಿ ತಿಂಗಳಲ್ಲಿ ಭಾರತ ಕ್ರಿಕೆಟ್ ತಂಡದ ಪಾಕಿಸ್ತಾನದ ಪ್ರವಾಸ ಮೊಟಕುಗೊಳ್ಳುವ ಸಾಧ್ಯತೆಗಳಿವೆ. ಭಾರತೀಯ ಕ್ರಿಕೆಟ್ ತಂಡದ ಪ್ರವಾಸಕ್ಕೆ ಯೋಗ್ಯ ವಾತಾವರಣವಿಲ್ಲ ಎಂದು ಭಾರತೀಯ ವಿದೇಶಾಂಗ ಇಲಾಖೆ ವರದಿ ನೀಡಿರುವುದರಿಂದ ಬಿಸಿಸಿಐ ಈ ಕ್ರಮಕೈಗೊಂಡಿದೆ.

ಪಾಕಿಸ್ತಾನದಲ್ಲಿರುವ ಭಾರತೀಯ ವಿದೇಶಾಂಗ ಇಲಾಖೆ ಕೂಡಾ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಪಾಕಿಸ್ತಾನದಲ್ಲಿ ಇತ್ತೀಚೆಗೆ ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗಿದ್ದು, ಇಂತಹ ಸಂದರ್ಭದಲ್ಲಿ ಭಾರತ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡು ಅಪಾಯ ತಂದುಕೊಳ್ಳುವುದನ್ನು ಬಿಟ್ಟು ಪ್ರವಾಸವನ್ನೆ ರದ್ದು ಮಾಡುವುದು ಸೂಕ್ತ ಎಂಬ ವರದಿಯನ್ನು ಬಿಸಿಸಿಐ ಗೆ ನೀಡಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದರ ಬಗ್ಗೆ ಬಿಸಿಸಿಐ ಇನ್ನೂ ಸೂಕ್ತ ತೀರ್ಮಾನ ಕೈಗೊಂಡಿಲ್ಲ. ಪ್ರವಾಸಕ್ಕೆ ಇನ್ನೂ ಒಂದೂವರೆ ತಿಂಗಳು ಬಾಕಿಯಿದ್ದರಿಂದ ಡಿಸೆಂಬರ್ ತಿಂಗಳಲ್ಲಿ ಇನ್ನೊಂದು ಸಾರಿ ಪರಿಸ್ಥಿತಿಯ ಅವಲೋಕನ ಮಾಡಲಾಗುವುದು. ಕಾನೂನು ಸುವ್ಯವಸ್ಥೆ ಸಹಜ ಸ್ಥಿತಿ ಬಂದು, ವಾತಾವರಣ ತಿಳಿಗೊಂಡಿದ್ದರೆ ಪ್ರವಾಸದ ಬಗ್ಗೆ ಚರ್ಚೆ ನಡೆಸಲಾಗುವುದು. ಪ್ರವಾಸ ಕುರಿತು ವಿದೇಶಾಂಗ ಇಲಾಖೆ ವರದಿಯ ಆಧಾರದ ಮೇಲೆ ನಿಂತಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ ಶುಕ್ಲಾ ಸ್ಪಷ್ಟಪಡಿಸಿದ್ದಾರೆ.

ಜನವರಿಯಲ್ಲಿ ಭಾರತೀಯ ಕ್ರಿಕೆಟ್ ಪಾಕಿಸ್ತಾನ ಪ್ರವಾಸ ಕೈಗೊಳ್ಳಬೇಕಿದ್ದು, ಐದು ಒಂದು ಏಕದಿನ (ಪೈಸಲಾಬಾದ್, ಲಾಹೋರ್, ರಾವಲ್ಪಿಂಡಿ, ಮುಲ್ತಾನ್ ಹಾಗೂ ಕರಾಚಿ) ಮೊರು ಟೆಸ್ಟ್ (ಕರಾಚಿ, ರಾವಲ್ಪಿಂಡಿ ಹಾಗೂ ಲಾಹೋರ್) ಮತ್ತು ಒಂದು ಟ್ವೆಂಟಿ20 (ಕರಾಚಿ) ಪಂದ್ಯವನ್ನು ಆಡಬೇಕಿದೆ. ಇದಕ್ಕೂ ಮುನ್ನ ಭಾರತೀಯ ಹಾಕಿ ತಂಡ ಕೂಡಾ ಪಾಕಿಸ್ತಾನ ಪ್ರವಾಸ ಕೈಗೊಳ್ಳಬೇಕಿದೆ. ಉಗ್ರಗ ಭೀತಿಯಿಂದ ಈ ಪ್ರವಾಸವನ್ನು ಕೂಡಾ ರದ್ದುಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ಕ್ರೀಡಾ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+