ಜೆಡಿಎಸ್ ಮೈತ್ರಿ ಕುರಿತಂತೆ ಸಿದ್ದರಾಮಯ್ಯ ಸ್ಪಷ್ಚನೆ

ಬೆಂಗಳೂರು, ನ. 12 : ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಕೊನೆಗೂ ತಮ್ಮ ಮನದಾಳದ ಇಂಗಿತ ಹೊರಗೆಡುವಿದ್ದಾರೆ. ಜಾತ್ಯಾತೀತ ಜನತಾದಳದೊಂದಿಗೆ ಹೊಂದಾಣಿಕೆ ಮಾಡಿಕೊಂಡರೆ ಪಕ್ಷದಿಂದ ಹೊರಹೋಗುವುದಾಗಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ.

ಮಂಗಳವಾರ ನಗರದ ವಿಜಯನಗರದಲ್ಲಿರುವ ತಮ್ಮ ನಿವಾಸಕ್ಕೆ ಶಿವಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ವಿದಾನಸಭೆಯ ಎಂಟು ಕ್ಷೇತ್ರಗಳಿಗೆ ನಡೆಯುವ ಮರು ಚುನಾವಣೆ ಹಾಗೂ ಮುಂದಿನ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಜತೆಗೆ ಕೈಜೋಡಿಸಿದ್ದೆ ಆದಲ್ಲಿ, ತಾವು ಪಕ್ಷದಲ್ಲಿ ಉಳಿಯುವುದಿಲ್ಲ ಎಂದು ನೇರವಾಗಿ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಪಕ್ಷದ ಕಾರ್ಯಕ್ರಮಗಳಿಂದ ಸಿದ್ದು ದೂರ ಉಳಿದಿದ್ದಾರೆ. ಈ ಬೆಳವಣಿಗೆ ಪಕ್ಷದ ಹಿತಕ್ಕೆ ಮಾರಕವಾಗುವ ಲಕ್ಷಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಆದೇಶದ ಮೇರೆಗೆ ಡಿ ಕೆ ಶಿವಕುಮಾರ್ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಅವರ ಮನವೊಲಿಸುವ ಯತ್ನ ನಡೆಸಿದರು. ಉಭಯ ನಾಯಕರು ಸುಮಾರು 45 ನಿಮಿಷ ಮಾತುಕತೆ ನಡೆಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+