• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೈಸೂರಿನ ಟ್ರಕ್ ಟರ್ಮಿನಲ್ ಗೆ ಶಂಕುಸ್ಥಾಪನೆ

By Staff
|

ಮೈಸೂರು, ನ. 13 - ಕರ್ನಾಟಕ ಸರ್ಕಾರವು ರಾಜ್ಯದ ನಗರಗಳ ಹೊರವಲಯಗಳಲ್ಲಿ ಲಾರಿ ನಿರ್ವಹಣೆದಾರರಿಗೆ ಪ್ರತ್ಯೇಕವಾಗಿ ತಂಗುದಾಣ ಹಾಗೂ ಸರಕುಗಳನ್ನು ಏರಿಳಿಸುವ ವ್ಯವಸ್ಥೆ ಒದಗಿಸುವ ಉದ್ದೇಶದಿಂದ ಹಾಗೂ ನಗರಗಳಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ, ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಕಂಪನಿಯನ್ನು ಸ್ಥಾಪಿಸಿದೆ.

ಐತಿಹಾಸಿಕ ನಗರಿ ಮೈಸೂರಿನಲ್ಲಿ ಪ್ರಪ್ರಥಮ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲು 16.20 ಎಕರೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಈ ಕಂಪನಿಗೆ ಹಸ್ತಾಂತರಿಸಿದೆ. ಟ್ರಕ್ ಟರ್ಮಿನಲ್ ಬಡಾವಣೆ ನಕ್ಷೆಯನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆಯನ್ನು ಪಡೆದು ಟ್ರಕ್ ಟರ್ಮಿನಲ್ ನಿರ್ಮಾಣದ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದೆ.

ಮೈಸೂರು ನಂಜನಗೂಡು ರಸ್ತೆಯ ಬಂಡೀಪಾಳ್ಯ ಮತ್ತು ನಾಚನಹಳ್ಳಿ ಗ್ರಾಮಗಳ ಬಳಿಯ ರಿಂಗ್ ರಸ್ತೆಯಲ್ಲಿರುವ ಟ್ರಕ್ ಟರ್ಮಿನಲ್ ನಿರ್ಮಾಣದ ಜಮೀನಿನಲ್ಲಿ ನವೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ಸಾರಿಗೆ ಸಚಿವ ಆರ್ ಅಶೋಕ್ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಜ್ಯೋತಿ ಬೆಳಗಿಸುವರು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಎಂ ಸತ್ಯನಾರಾಯಣ ಅಧ್ಯಕ್ಷತೆ ವಹಿಸುವರು. ಮೈಸೂರಿನ ಮಹಾಪೌರ ಆಯೂಬ್ ಖಾನ್ ಉಪಸ್ಥಿತರಿರುವರು.

ಕರ್ನಾಟಕ ಸರ್ಕಾರವು ರಾಜ್ಯದ ನಗರಗಳ ಹೊರವಲಯಗಳಲ್ಲಿ, ಲಾರಿ ನಿರ್ವಹಣೆದಾರರಿಗೆ ಪ್ರತ್ಯೇಕವಾದ ತಂಗುದಾಣ ಹಾಗೂ ಸರಕುಗಳನ್ನು ಏರಿಳಿಸುವ ವ್ಯವಸ್ಥೆ ಮಾಡುವ ಉದ್ದೇಶದಿಂದ ಹಾಗೂ ನಗರಗಳಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ, ಅಪಘಾತಗಳನ್ನು ತಡೆಗಟ್ಟುವ ಮತ್ತು ರಸ್ತೆಗಳಿಗೆ ಆಗುವ ಹಾನಿಗಳನ್ನು ಹಾಗೂ ವಾಯುಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಟ್ ಕಂಪನಿಯನ್ನು ಸ್ಥಾಪಿಸಿದೆ.

ಪ್ರಾರಂಭದಲ್ಲಿ ಯಶವಂತಪುರ ಹೋಬಳಿ, ದಾಸನಾಯಕನಪಾಳ್ಯ ಕೈಗಾರಿಕಾ ಉಪ ನಗರ 2ನೇ ಹಂತ ಇಲ್ಲಿ 39.00 ಎಕರೆ ಪ್ರದೇಶದಕ್ಕು ಟ್ರಕ್ ಟರ್ಮಿನಲ್ ಸ್ಥಾಪಿಸಿದ್ದು ಈಗ ಮೈಸೂರಿನಲ್ಲಿಯೂ ಟ್ರಕ್ ಟರ್ಮಿನಲ್ ನಿರ್ಮಿಸಲಾಗುತ್ತಿದೆ.

(ದಟ್ಸ್ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more