ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ಮತಾಂತರದ ರಗಳೆ: ಮೂವರ ಸೆರೆ

By Staff
|
Google Oneindia Kannada News

ಬೆಂಗಳೂರು, ನ. 14 : ನಗರದ ಫ್ರೇಜರ್ ಟೌನ್ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ಮೂರು ಮಂದಿ ಮಹಿಳೆಯರನ್ನು ಮತಾಂತರಕ್ಕೆ ಯತ್ನಿಸುತ್ತಿದ್ದ ಮಹಿಳೆಯರನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಶುಕ್ರವಾರ ನಡೆದಿದೆ.

ಬಂಧಿಕರಾಗಿರುವ ಮಹಿಳೆಯರು ಮನೆ ಮನೆಗೆ ತೆರಳಿ ಕ್ರೈಸ್ತ ಮತದ ಕುರಿತು ಪ್ರಚಾರ ನಡೆಸುತ್ತಿದ್ದಾಗ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಾರ್ವಜನಿಕರ ಸಹಾಯದಿಂದ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಮಹಿಳೆಯರಿಂದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆರೆದಿದ್ದ ಸಾರ್ವಜನಿಕರು ಮತಾಂತರದ ವಿರುದ್ಧ ಘೋಷಣೆ ಕೂಗಿ, ಮತಾಂತರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಭಾಗದಲ್ಲಿ ಮತಾಂತರದ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, ಇದನ್ನ ತಡೆಯದಿದ್ದರೆ ನಾವೇ ಸರಿಯಾದ ಪಾಠ ಕಲಿಸುತ್ತೇವೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ. ಮತಾಂತರಕ್ಕೆ ಸಂಬಂಧಿಸಿದಂತೆ ಮಂಗಳೂರು ಸೇರಿ ರಾಜ್ಯದ ಅನೇಕ ಕಡೆ ಚರ್ಚ್ ಮೇಲೆ ದಾಳಿ ನಡೆದಿತ್ತು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X