ವೈದ್ಯರ ಬೇಡಿಕೆಗಳಿಗೆ ಸ್ಪಂದಿಸಿದ ಸರ್ಕಾರ
ಬೆಂಗಳೂರು, ನ. 14 : ಸರ್ಕಾರದ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಮುಷ್ಕರ ಹಿಂತೆಗೆದುಕೊಂಡಿರುವ ಸರ್ಕಾರಿ ವೈದ್ಯರು ಇಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಇದರೊಂದಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದ ರೋಗಿಗಳು ನಿಟ್ಟುಸಿರು ಬಿಡುವಂತಾಯಿತು.
ರಾಜ್ಯ ವೈದ್ಯಾಧಿಕಾರಿಗಳ ಸಂಘ ಪದಾಧಿಕಾರಿಗಳೊಂದಿಗೆ ಗುರುವಾರ ರಾತ್ರಿ ಗೃಹ ಸಚಿವ ವಿ ಎಸ್ ಆಚಾರ್ಯ, ಆರೋಗ್ಯ ಸಚಿವ ಬಿ., ಶ್ರೀರಾಮುಲು, ಸಾರಿಗೆ ಸಚಿವ ಆರ್ ಅಶೋಕ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಎಚ್ ಹಾಲಪ್ಪ ವೈದ್ಯರೊಂದಿಗೆ ಮಾತುಕತೆ ನಡೆಸಿದರು. ಮುಷ್ಕರ ನಿತರ ವೈದ್ಯರು ಪಟ್ಟು ಹಿಡಿದಿದ್ದ ವೇತನ ಹೆಚ್ಚಳದ ಬೇಡಿಕೆಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿ ವೇತನ ತಾರತಮ್ಯ ಸರಿಪಡಿಸುವದಾಗಿ ಭರವಸೆ ನೀಡಿದರು. ಸರ್ಕಾರದ ಕ್ರಮವನ್ನು ಸ್ವಾಗತಿಸಿದ ವೈದ್ಯರ ಸಂಘ ಮುಷ್ಕರವನ್ನು ಹಿಂತೆಗೆದುಕೊಂಡಿತು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications