ಆಸ್ನೋಟಿಕರ್ ವಿರುದ್ಧ ವಾರೆಂಟ್ ಜಾರಿ
ಕಾರವಾರ, ನ. 14 : ಚುನಾವಣೆ ಆಯೋಗಕ್ಕೆ ಅಪೂರ್ಣ ಮಾಹಿತಿ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆನಂದ ಅಸ್ನೋಟಿಕರ್ ನಗರದ ಸಿವಿಲ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಆನಂದ ಅಸ್ನೋಟಿಕರ್ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ಇಂದು ವಿಚಾರಣೆ ನಡೆಸಿದ ಕಾರವಾರದ ಸಿವಿಲ್ ನ್ಯಾಯಾಲಯ, ಆನಂದ ಅಸ್ನೋಟಿಕರ್ ಪರ ವಕೀಲರು ವಾದಿಸಿದರು. ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ಅಸ್ನೋಟಕರ್ ಕ್ರಮದಿಂದ ನ್ಯಾಯಾಧೀಶರು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟು ಹೊರಡಿಸಿದ್ದಾರೆ. ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಆನಂದ್ ಅಸ್ನೋಟಿಕರ್ ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಸಚಿವರಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications