ಪ್ರಗ್ಯಾಸಿಂಗ್ ನ್ಯಾಯಾಂಗ ಬಂಧನ ವಿಸ್ತರಣೆ

ನಾಸಿಕ್, ನ. 17 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಇಂದು ನಾಸಿಕ್ ನ್ಯಾಯಾಲಯ ಪ್ರಮುಖ ಆರೋಪಿಯಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಸೇರಿ ಒಂಬತ್ತು ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ನ. 29ರವರೆಗೆ ವಿಸ್ತರಿಸಿದೆ.

ನ್ಯಾಯಾಲಯದ ಆದೇಶದಂತೆ ಮಂಗಳವಾರ ಇವರ ನ್ಯಾಯಾಂಗ ಬಂಧನ ಕೊನೆಗೊಳ್ಳಬೇಕಿತ್ತು. ಆದರೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಪೊಲೀಸರು ಮಾಡಿಕೊಂಡಿರುವ ಮನವಿಯನ್ನು ಪುರಷ್ಕರಿಸಿದ ನ್ಯಾಯಾಲಯ ಆರೋಪಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿತು.

ಪ್ರಗ್ಯಾಸಿಂಗ್ ಠಾಕೂರ್ ಅಮಾಯಕರಾಗಿದ್ದು, ಎಟಿಎಸ್ ಪೊಲೀಸರು ವಿನಾಕಾರಣ ಅವರಿಗೆ ಹಿಂಸೆ ನೀಡುತ್ತಿದ್ದಾರೆ ಎಂದು ಸಾಧ್ವಿ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಇಂಗ್ಲಿಷ್ ಭಾಷೆ ಕೊರತೆಯ ಕಾರಣ ನನಗೆ ಏನು ನಡೆಯುತ್ತದೆ ಎನ್ನುವುದು ತಿಳಿಯುತ್ತಿಲ್ಲ. ಆದ್ದರಿಂದ ಮುಂದಿನ ವಿಚಾರಣೆಯನ್ನು ಹಿಂದಿ ಭಾಷೆಯಲ್ಲಿ ವಿಚಾರಣೆ ನಡೆಸಬೇಕು ಎಂಬ ಒಕ್ಕಣಿಕೆಯುಳ್ಳ ಪ್ರಮಾಣಪತ್ರವನ್ನು ಪ್ರಗ್ಯಾಸಿಂಗ್ ನ್ಯಾಯಾಲಯಕ್ಕೆ ಸಲ್ಲಿಸಿದರು.

ಮಾಲೇಗಾಂವ್ ಸ್ಫೋಟದಲ್ಲಿ ಬಂಧಿತರಾಗಿರುವ ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಗುಜರಾತ್ ಪೊಲೀಸರು ನಾಸಿಕ್ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಕಳೆದ ಸೆ. 29ರಂದು ಮಾಲೇಗಾಂವ್ ಸ್ಫೋಟ ಸಂಭವಿಸಿದ್ದು, 6 ಮಂದಿ ಮೃತಪಟ್ಟಿದ್ದರು ಮತ್ತು 101 ಜನ ಗಾಯಗೊಂಡಿದ್ದರು. ಸ್ಫೋಟದಲ್ಲಿ ಸಾಧ್ವಿ ಪ್ರಗ್ಯಾಸಿಂಗ್ ಅವರಿಗೆ ಸಂಬಂಧಿಸಿದ ಬೈಕ್ ಸಿಕ್ಕಿದೆ. ಇದರ ಆಧಾರದ ಮೇಲೆ ಮಹಾರಾಷ್ಟ್ರ ಎಟಿಎಸ್ ಅವರನ್ನು ಬಂಧಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+