ಮಾದಕ ವಸ್ತು ಮಾರಾಟ ಇಬ್ಬರು ಸೆರೆ
ಬೆಂಗಳೂರು, ನ. 19 : ಬುಧವಾರ ನಗರದ ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಕಬ್ಬನ್ ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಂಧಿಸಿ ಸುಮಾರು ಒಂದು ಕೋಟಿ ರುಪಾಯಿ ಮೌಲ್ಯದ ಅಫೀಮು ವಶಪಡಿಸಿಕೊಂಡಿದ್ದಾರೆ.
ಅನಿಲ್ ಮತ್ತು ಗೋವಿಂದ ಬಂಧಿತ ಆರೋಪಿಗಳು. ಈ ಇಬ್ಬರು ರಾಜಸ್ತಾನ ಮೂಲದವರಾಗಿದ್ದಾರೆ. ಅನಿಲ್ ಎಂಬಾತನು ನಗರದ ಯಲಹಂಕ ಬಳಿ ಕೋಗಿಲು ಪ್ರದೇಶದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದು, ಕಳೆದ ಅನೇಕ ವರ್ಷಗಳಿಂದ ಈ ದಂಧೆಯಲ್ಲಿ ತೊಡಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು, ರಾಜಸ್ಥಾನ ಹಾಗೂ ಹೈದರಾಬಾದ್ ನಲ್ಲಿ ಇವರ ಮಾರಾಟ ಜಾಲವಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications