ಕ್ರಿಕೆಟರ್ ಕಿರ್ಮಾನಿಗೆ ಲಘು ಹೃದಯಾಘಾತ
ಬೆಂಗಳೂರು, ನ. 19 : ಕರ್ನಾಟಕ ಕ್ರಿಕೆಟ್ ಆಯ್ಕೆ ಸಮಿತಿ ಹಾಲಿ ಅಧ್ಯಕ್ಷ ಸಯ್ಯದ್ ಕಿರ್ಮಾನಿ ಅವರಿಗೆ ಲಘು ಹೃದಯಾಘಾತವಾಗಿದ್ದರಿಂದ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವೊಕ್ಹಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ವರದಿಯ ಪ್ರಕಾರ ಕಿರ್ಮಾನಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದೇ ಮೊದಲ ಬಾರಿಗೆ ಕಿರ್ಮಾನಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಿಂಗ್ ಹ್ಯಾನ್ ರಸ್ತೆಯಲ್ಲಿರುವ ವೊಕ್ಹಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಪಾಸಣೆ ನಡೆಸಿದ ನಂತರ ಲಘು ಹೃದಯಾಘಾತವಾಗಿರುವುದನ್ನು ಡಾ.ರಂಗನಾಥ್ ನಾಯಕ್ ಪತ್ತೆ ಹಚ್ಚಿದ್ದಾರೆ. ತಕ್ಷಣ ಅಗತ್ಯ ಚಿಕಿತ್ಸೆಯನ್ನು ನೀಡಲಾಗಿದೆ. ಕಿರ್ಮಾನಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಯಾವುದೇ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೂರು ದಿನಗಳ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications