ಮಾಲೇಗಾಂವ್ ಸ್ಫೋಟ,10 ಮಂದಿ ವಿರುದ್ಧ ಮೊಕಾ
ಮುಂಬೈ, ನ . 21 : ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲ 10 ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮೊಕಾ ಕಾಯ್ದೆ (ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಜಾರಿಗೊಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಜಂಟಿ ಪೊಲೀಸ್ ಆಯುಕ್ತ ಹೇಮಂತ್ ಕರ್ಕರೆ, ಸಧ್ಯ ಈ ವಿಚಾರಣೆ ಅಂತಿಮ ಹಂತದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದರಿಂದ ಸದ್ಯ ಬಂಧನದಲ್ಲಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಹಾಗೂ ಕರ್ನಲ್ ಪುರೋಹಿತ್ ಅವರನ್ನು ಮೊಕಾ ಅಡಿ ಆರು ತಿಂಗಳ ಕಾಲ ಬಂಧನದಲ್ಲಿರಿಸಬಹುದಾಗಿದೆ. ಈ ಕಾಯ್ದೆಯಡಿ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು 90 ದಿನಗಳ ಬದಲಿಗೆ ಆರು ತಿಂಗಳ ಕಾಲಾವಕಾಶ ಇರುತ್ತದೆ. ಆರೋಪ ಸಾಬೀತಾದರೆ ಈ ಕಾಯ್ದೆಯಡಿ ಕನಿಷ್ಠ ಐದು ವರ್ಷ ಅಥವಾ ಜೀವಾವಧಿ ಶಿಕ್ಷೆ ಅನುಭವಿಸಬೇಕಾಗುತ್ತದೆ. ಮಹಾರಾಷ್ಟ್ರ ಎಟಿಎಸ್ ಪೊಲೀಸರು ರಾಜಕೀಯ ಒತ್ತಡದಿಂದ ಕೆಲಸ ಮಾಡುತ್ತಾರೆ ಎನ್ನುವ ಆರೋಪವನ್ನು ಕರ್ಕರೆ ತಳ್ಳಿಹಾಕಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications