ಚೆಸ್ ಚಾಂಪಿಯನ್ ಗೆ ಅದ್ಧೂರಿ ಸ್ವಾಗತ
ಚೆನ್ನೈ, ನ. 21 : ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ 24 ದಿನಗಳ ನಂತರ ಗ್ರಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್(ವಿಶಿ) ಇಂದು ಸ್ವದೇಶಕ್ಕೆ ಮರಳಿದರು. ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ತಮಿಳು ಸಂಸ್ಕೃತಿಯಂತೆ ಪೂರ್ಣ ಕುಂಭಮ್ ಮೂಲಕ ಸಾವಿರಾರು ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ವಿಶಿ ಅವರನ್ನು ಭವ್ಯವಾಗಿ ಬರಮಾಡಿಕೊಳ್ಳಲಾಯಿತು. ಜರ್ಮನಿಯ ಬಾನ್ ನಲ್ಲಿ ನಡೆದ ಪಂದ್ಯದಲ್ಲಿ ರಷ್ಯಾದ ವ್ಲಾಡಿಮಿರ್ ಕ್ರಾಮ್ನಿಕ್ ಅವರನ್ನು ಸೋಲಿಸುವ ಮೂಲಕ ಆನಂದ್ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಧರಿಸಿದ್ದರು.
ತಮಿಳುನಾಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳುನಾಡು ಚೆಸ್ ಆಸೋಸಿಯೇಷನ್ ಹಾಗೂ ಅಖಿಲ ಭಾರತ ಚೆಸ್ ಫೆಡರೇಷನ್ ಜಂಟಿಯಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಶಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಗರದ ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಆನಂದ್ ತಂದೆ ವಿಶ್ವನಾಥನ್, ತಾಯಿ ಸುಶೀಲಾ ಉಪಸ್ಥಿತರಿದ್ದರು. ಡಿ 11 ರಂದು ಆನಂದ್ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಆಚರಿಸಕೊಳ್ಳುವುದಾಗಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications