ಅಧಿಕಾರಿಗಳಿಗೆ ಪ್ರಾಮಾಣಿಕರಾಗಲು ಸಿಎಂ ಕರೆ

ಶಿವಮೊಗ್ಗ ನ.22: ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಜಿಲ್ಲಾ ಪಂಚಾಯತ್ ಪ್ರಮುಖ ಪಾತ್ರ ವಹಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ನಿರ್ವಹಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದರು.

ಶನಿವಾರ ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ನೂತನ ವಿಸ್ತರಣಾ ಕಟ್ಟಡದ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರ ಸರ್ವರಿಗೂ ಸಮಪಾಲು, ಸಮಬಾಳು ಎಂಬಂತೆ ಎಲ್ಲರ ಹಿತವನ್ನು ಗಮನದಲ್ಲಿರಿಸಿ ಯೋಜನೆಗಳನ್ನು ರೂಪಿಸಿದ್ದು, ದೇಶದಲ್ಲಿ ಇನ್ಯಾವುದೇ ಸರ್ಕಾರ ಕೊಡದಷ್ಟು ಸೌಲಭ್ಯಗಳನ್ನು ಜನಸಾಮಾನ್ಯರಿಗೆ ನೀಡಿದೆ ಎಂದರು.

ಬಡವರಿಗೆ, ಅಲ್ಪಸಂಖ್ಯಾತರಿಗೆ, ಕಾರ್ಮಿಕ ಸಮುದಾಯದವರಿಗೆ ಸೇರಿದಂತೆ ಎಲ್ಲರಿಗೂ ಅನುಕೂಲ ಒದಗಿಸಲು, ಸರ್ವರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ನೂತನ ಸವಲತ್ತುಗಳನ್ನು ರೂಪಿಸಲಾಗಿದ್ದು, ಈ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದರು. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸುವ ಭರವಸೆಯನ್ನು ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ವಿಶೇಷ ಆರ್ಥಿಕ ಅನುದಾನ ನೀಡುವಂತೆ ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಚ್. ಸಿ. ಬಸವರಾಜಪ್ಪ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನ್ಬು ಕುಮಾರ್ ಸ್ವಾಗತಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಿ. ಪಂ. ಅಧ್ಯಕ್ಷ ಚಂದ್ರಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇಂಧನ ಸಚಿವಈಶ್ವರಪ್ಪ, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹರತಾಳು ಹಾಲಪ್ಪ, ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್, ಸ್ಥಾಯಿ ಸಮಿತಿ ಅಧ್ಯಕರು, ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+