ಮಂಗಳೂರಿನಲ್ಲಿ ಮತ್ತೆ ಚರ್ಚ್ ಮೇಲೆ ದಾಳಿ
ಮಂಗಳೂರು, ನ. 22 : ಇಲ್ಲಿನ ಬಜ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿರುವ ಸೇಂಟ್ ಅಂಥೋನಿ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು ಪ್ರಾರ್ಥನಾ ಗೋಪುರ ಹಾಗೂ ಪ್ರತಿಮೆಯನ್ನು ಭಗ್ನಗೊಳಿಸಿರುವ ಘಟನೆ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಚರ್ಚ್ ನ ಉಪಾಧ್ಯಕ್ಷ ಮೈಕಲ್ ಡಿಕಾಸ್ಟ್ ಅವರು ಘಟನೆಗೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಿರುವ ಪೊಲೀಸರು ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ನಿಯೋಜಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ಸೇರಿದಂತೆ ರಾಜ್ಯ ವಿವಿಧೆಡೆ ಚರ್ಚೆ ಮೇಲೆ ದಾಳಿಗಳು ನಡೆದಿದ್ದವು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡು ರಾಜ್ಯ ಸರ್ಕಾರವನ್ನು ಇಕ್ಕಿಟ್ಟಿಗೆ ಸಿಲುಕಿಸಿದ್ದನ್ನು ಸ್ಮರಿಸಬಹುದು.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
