ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸರಣಿ ಜಯ
ಬೆಂಗಳೂರು, ನ, 24 : ವರುಣನ ಕಣ್ಣುಮುಚ್ಚಾಲೆ ಆಟದ ನಡುವೆ ಭಾನುವಾರ ನಗರದ ಚಿನ್ನಸ್ವಾಮಿ ಕ್ರೀಡಾಗಣದಲ್ಲಿ ನಡೆದ ಹೊನಲು ಬೆಳಕಿನ ಪಂದ್ಯದಲ್ಲಿ ಭಾರತ ಪ್ರವಾಸಿ ಇಂಗ್ಲೆಂಡ್ ತಂಡವನ್ನು 16 ರನ್ ಗಳಿಂದ ಸೋಲಿಸುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 22 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ವೀರೇಂದ್ರ ಸೆಹವಾಗ್ 69, ಗಂಭೀರ್ 40, ಯುವರಾಜ್ 25 ರನ್ ಗಳಿಸಿದರು. ಡಕ್ ವರ್ಥ ಲೂಯಿಸ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆ 22 ಒವರ್ ಗಳಲ್ಲಿ 198 ರನ್ ಗುರಿ ನೀಡಲಾಯಿತು. ಈ ಗುರಿ ಬೆನ್ನಟ್ಟಿದ ಅತಿಥೇಯ ಪ್ರವಾಸಿ ಇಂಗ್ಲೆಂಡ್ ತಂಡ 8 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಲು ಮಾತ್ರ ಸಾಧ್ಯ್ಯವಾಯಿತು. ಒವೈಸ್ ಶಾ 72, ಪ್ಲಿಂಟಾಪ್ 41 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರರೂ ಹೆಚ್ಚು ಹೊತ್ತು ಕ್ರಿಸ್ ಬಳಿ ನಿಲ್ಲಲು ಸಾಧ್ಯವಾಗಲಿಲ್ಲ. ಭಾರತದ ಪರ ಜಹೀರ್ ಖಾನ್, ಮುನಾಫ್ ಪಟೇಲ್, ಇಶಾಂತ್ ಶರ್ಮಾ ತಲಾ 2 ವಿಕೆಟ್ ಗಳಿಸಿದರು. ಆಕರ್ಷಕ ಅರ್ಧ ಶತಕ ಗಳಿಸಿದ್ದ ವೀರೇಂದ್ರ ಸೆಹ್ವಾಗ್ ಪಂದ್ಯ ಪುರುಷ ಪ್ರಶಸ್ತಿ ಪಡೆದರು. ಐದನೇ ಪಂದ್ಯ ನ.26 ರಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
