ಧಾರವಾಡ ಬಂದ್, ಕಲ್ಲು ತೂರಾಟ, ಉದ್ವಿಗ್ನ

ಧಾರವಾಡ, ಡಿ. 1 : ಮುಂಬೈ ಭಯೋತ್ಪಾದನೆ ಖಂಡಿಸಿ ಇಂದು ಜಯ ಕರ್ನಾಟಕ ಸಂಘ ನೀಡಿರುವ ಧಾರವಾಡ ಬಂದ್ ಕರೆಯಲ್ಲಿ ಉದ್ರಿಕ್ತ ಜನರ ಗುಂಪೊಂದು ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದರಿಂದ ನಗರದಾದ್ಯಂತ ತ್ವೇಷಮಯ ವಾತಾವರಣ ಉಂಟಾಗಿದೆ. ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬಂದ್ ಯಶಸ್ವಿಯಾಗಿದೆ.

ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಭಾರಿ ಬಿಗಿಭದ್ರೆತೆಯನ್ನು ನಿಯೋಜಿಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಬುಧವಾರ ದೇಶದ ವಾಣಿಜ್ಯ ನಗರಿ ಮುಂಬೈಯಲ್ಲಿ ಪಾಕಿಸ್ತಾನದಲ್ಲಿ ತರಬೇತಿ ಪಡೆದ ಲಷ್ಕರ್-ಇ-ತೊಯ್ಬಾ ಸಂಘಟನೆ ಸೇರಿದವರು ಎನ್ನಲಾದ ಉಗ್ರರು ನಡೆಸಿದ ಭಯೋತ್ಪಾದನಾ ಅಟ್ಟಹಾಸದಿಂದ 195 ಮಂದಿ ಮೃತಪಟ್ಟಿದ್ದಾರೆ. 300 ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ, ಎನ್ ಕೌಂಟರ್ ಸ್ಪೆಷಲಿಸ್ಟ್ ವಿಜಯ್ ಸಲಸ್ಕರ್, ಡಿಸಿಪಿ ಅಸೋಕ್ ಕಾಮ್ಟೆ ಹಾಗೂ ಎನ್ ಎಸ್ ಜಿ ಮೇಜರ್ ಸಂದೀಪ್ ಉನ್ನಿಕೃಷ್ಣನ್ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಕೇಂದ್ರದಲ್ಲಿ ಸರ್ಕಾರ ಭಯೋತ್ಪಾದನೆ ಹತ್ತಿಕ್ಕುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಕೇಂದ್ರ ಗುಪ್ತಚರ ಇಲಾಖೆ ವೈಫಲ್ಯದಿಂದ ಇಂದು ಅಮಾಯಕರು ಪ್ರಾಣ ತೆರಬೇಕಾಗಿದೆ. ಇಂದು ಮುಂಬೈನಲ್ಲಾದರೆ ನಾಳೆ ಇನ್ನೆಲ್ಲೂ ಎಂಬ ಭಾವನೆ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಕೇಂದ್ರ ಸರ್ಕಾರ ಉಗ್ರರ ಬಗ್ಗೆ ಮೃದುಧೋರಣೆ ತಾಳಿದ ಪರಿಣಾಮವೇ ಇಂದು ದೇಶದಲ್ಲಿ ಅಶಾಂತಿ ವಾತಾವರಣ ಉಂಟಾಗಿದೆ ಎಂದು ಪ್ರತಿಭಟನಾ ನಿರತ ಜಯಕರ್ನಾಟಕ ಸಂಘದ ಕಾರ್ಯಕರ್ತರು ಆಕ್ರೋಷ ವ್ಯಕ್ತಪಡಿಸಿದರು.

ಮುಂಬೈ ಘಟನೆಯನ್ನು ಖಂಡಿಸಿ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ನಗರದ ಶ್ರೀನಗರ ಕ್ರಾಸ್ ಬಳಿ ಉದ್ರಿಕ್ತ ಕಾರ್ಯಕರ್ತರು ಎರಡು ಕೆಎಸ್ ಆರ್ ಟಿಸಿ ಎರಡು ಖಾಸಗಿ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿದರು. ಆಗ ಕೆಲ ಕಾಲ ವಾತಾವರಣ ಬಿಗಿವಿನಿಂದ ಕೂಡಿತು. ಸ್ಥಳದಲ್ಲಿ ಪೊಲೀಸರು ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಸಮಾಧಾನಗೊಳಿಸಿದ್ದರಿಂದ ವಾತಾವರಣ ತಿಳಿಯಾಯಿತು. ಪ್ರತಿಭಟನೆಗೆ ಭಾರಿ ಬಂದೋಬಸ್ಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+