ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಡಿ. 3 : ಜಿಲ್ಲೆಯ ಹೊಸನಗರ, ಶಿರಾಳಕೊಪ್ಪ, ತೀರ್ಥಹಳ್ಳಿ ಹಾಗೂ ಜೋಗ -ಕಾರ್ಗಲ್ ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಅರ್ಹ ಅಭ್ಯರ್ಥಿಗಳನ್ನು ತಲಾ ಒಬ್ಬರಂತೆ ಕೆ.ಎಂ.ಆರ್.ಪಿ. ಯೋಜನೆಯಡಿ ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

18 ರಿಂದ 33 ವರ್ಷದೊಳಗಿನ ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೊಮೊ (ಐಟಿ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ಪ್ರವರ್ಗಕ್ಕೆ ವಯೋಮಿತಿಯಲ್ಲಿ ಸಡಿಲಿಕೆ ಇದ್ದು, 18 ರಿಂದ 38 ವರ್ಷಗಳೊಳಗಿನ ಅಭ್ಯರ್ಥಿಗಳು, ಹಿಂದುಳಿದ ಪ್ರವರ್ಗ 2(ಎ), (ಬಿ), 3(ಬಿ), 3(ಎ) ಪ್ರವರ್ಗದ 18 ರಿಂದ 36ವರ್ಷ ದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಿಗದಿತ ಅರ್ಜಿ ನಮೂನೆಯನ್ನು 100 ರೂ ನೀಡಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪಡೆಯಬಹುದು. ಡಿ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರನ್ನು ಸಂಪರ್ಕಿಸಬಹುದು.

******
ಪದವಿ ಪರೀಕ್ಷೆ: 36 ವಿದ್ಯಾರ್ಥಿಗಳು ಡಿಬಾರ್

ಗುಲಬರ್ಗಾ, ಡಿ. 3: ಗುಲಬರ್ಗಾ ವಿಶ್ವವಿದ್ಯಾಲಯದಿಂದ ಬುಧವಾರ ನಡೆದ ವಿವಿಧ ವಿಷಯಗಳ ಪದವಿ ಪರೀಕ್ಷೆಯಲ್ಲಿ ಪರೀಕ್ಷಾ ಅವ್ಯವಹಾರ ಮತ್ತು ಅಕ್ರಮದಲ್ಲಿ ತೊಡಗಿದ್ದ 36 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಮಠ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಪರೀಕ್ಷಾ ಅಕ್ರಮ ಹಾಗೂ ಅವ್ಯವಹಾರದಲ್ಲಿ ತೊಡಗಿದ್ದ ಒಟ್ಟು 168 ವಿದ್ಯಾರ್ಥಿಗಳನ್ನು ಈವರೆಗೆ ಡಿಬಾರ್ ಮಾಡಲಾಗಿದೆ.

ಪದವಿ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯಲು 20 ತಂಡಗಳು, 2 ವಿಶೇಷ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+