1500 ಕೋ. ರು ಗಳ ನೀರು ಸರಬರಾಜು ಯೋಜನೆ
ಬೆಂಗಳೂರು, ಡಿ. 5 : ವಿಶ್ವಬ್ಯಾಂಕ್ ನೆರವಿನಲ್ಲಿ 3ನೇ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಯೋಜನೆಯನ್ನು ತಯಾರಿಸಿದ್ದು ಸುಮಾರು 1500 ಕೋಟಿ ರು ಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆ, ಬಳ್ಳಾರಿ, ಚಿತ್ರದುರ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ರಾಯಚೂರು, ಕೊಪ್ಪಳ, ಗುಲ್ಬರ್ಗಾ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಐದು ವರ್ಷಗಳ ಈ ಯೋಜನಾ ಪ್ರಸ್ತಾವನೆಯನ್ನು ವಿಶ್ವ ಬ್ಯಾಂಕಿಗೆ ಸಲ್ಲಿಸುವ ತೀರ್ಮಾನ ಕೈಗೊಳ್ಳಲಾಯಿತು.
ರಾಜ್ಯ ಕೌಶಲ್ಯ ಅಭಿವೃದ್ಧಿ ಕಾರ್ಯನೀತಿಗೆ ಸಂಪುಟ ಒಪ್ಪಿಗೆ ನೀಡಿದೆ, ನಿರುದ್ಯೋಗಿ ಯುವಕರಿಗೆ ತರಬೇತಿ ಮತ್ತು ಉದ್ಯೋಗ ನೀಡಿಕೆ ಮುಂದಿನ ಐದು ವರ್ಷಗಳಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಸಂಬಂಧಿಸಿದಂತೆ ಯೋಜನೆ ಇದೆ. ಬೆಂಗಳೂರು ಹುಬ್ಬಳ್ಳಿಯಲ್ಲಿ ನಡೆಸಿದ ಕೌಶಲ್ಯ ಮೇಳದಲ್ಲಿ ೩೦,೦೦೦ ಜನ ನೋಂದಾವಣೆ ಮಾಡಿದ್ದು 5733 ಜನರಿಗೆ ಉದ್ಯೋಗ ನೀಡಿದ್ದು, 5000 ಜನರಿಗೆ ತರಬೇತಿ ನೀಡಲಾಗಿದೆ. ಸರ್ಕಾರದಿಂದ 25 ಕೋಟಿ ಅನುದಾನವನ್ನು ಈಗಾಗಲೇ ನೀಡಿದ್ದು 30 ಕೋಟಿ ರೂ ಹೆಚ್ಚುವರಿ ಅನುದಾನವನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಕರಂದ್ಲಾಜೆ ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications