ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ವಿಮಾನ ನಿಲ್ದಾಣದಲ್ಲಿ ಗುಂಡಿನ ಮೊರೆತ

By Staff
|
Google Oneindia Kannada News

ನವದೆಹಲಿ, ಡಿ.5 : ಭಾರಿ ಬಿಗಿ ಭದ್ರತೆ ನಡುವೆ ಶುಕ್ರವಾರ ಬೆಳ್ಳಂಬೆಳಗ್ಗೆ ನಗರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡಿನ ಮೊರತೆದ ಸುದ್ದಿ ಕೇಳಿಬಂದಿದೆ. ಶುಕ್ರವಾರ ನಸುಕಿನ ಜಾವ 1.20ರ ಸುಮಾರಿಗೆ ಕ್ವಾಲೀಸ್ ಕಾರಿನಲ್ಲಿ ಬಂದಿದ್ದ ಉಗ್ರರು ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಉಗ್ರರು ನಡೆಸಿದ್ದ ದಾಳಿಯಲ್ಲಿ ಎರಡು ಕಾರುಗಳು ಜಖಂಗೊಂಡಿವೆ. ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಗುಂಡಿನ ಸದ್ದು ಕೇಳಿದ ಕಡೆಗೆ ದೌಡಾಯಿಸಿದ್ದಾರೆ ಅಷ್ಟೊತ್ತಿಗೆ ಗುಂಡು ಹಾರಿಸಿದ ಉಗ್ರರು ಅಲ್ಲಿಂದ ಪರಾರಿಯಾಗಿದ್ದರು. ಜಖಂಗೊಂಡಿರುವ ಕಾರುಗಳ ಮೇಲೆ ಗುಂಡು ಹಾರಿಸಿದ ಗುರುತುಗಳಿವೆ ಆದರೆ, ಕಾಡತೂಸು ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಪ್ರಕಾರ ಡಿ.6ರೊಳಗೆ ಬೆಂಗಳೂರು, ಚೆನ್ನೈ ಹಾಗೂ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ವೈಮಾನಿಕ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದ ನಂತರ ಈ ಮೂರು ನಿಲ್ದಾಣಕ್ಕೆ ಭಾರಿ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು. ರಾತ್ರಿ ಕೇಳಿ ಬಂದ ಗುಂಡಿನ ಶಬ್ಧದಿಂದ ಪ್ರಯಾಣಿಕರು ಕೆಲ ಕಾಲ ಆತಂಕಪಡುವಂತಾಯಿತು. ಸುಮಾರು 45 ನಿಮಿಷಗಳ ಕಾಲ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಯನ್ನು ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X