ಸರ್ಕಾರದ ವಿರುದ್ಧ ದೇವೇಗೌಡ ಕಿಡಿ
ತುರುವೇಕೆರೆ, ಡಿ. 5 : ಹಿರಿಯ ಕೆಎಎಸ್ ಅಧಿಕಾರಿ ವೀರಭದ್ರಯ್ಯ ಅವರಿಗೆ ಸ್ವಯಂ ನಿವೃತ್ತಿ ತೆಗೆದುಕೊಳ್ಳಲು ಸರ್ಕಾರ ಅನುಸರಿಸಿರುವ ಕ್ರಮ ಮೂರ್ಖತನದ್ದು ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸರ್ಕಾರದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತುರುವೇಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎಂಟಿ ಕೃಷ್ಣಪ್ಪ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ದೇವೇಗೌಡ, ಸ್ವಯಂ ನಿವೃತ್ತಿ ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದ್ದರೂ ಸರ್ಕಾರ ಅದಕ್ಕೆ ಅವಕಾಶ ಮಾಡಿಕೊಡದಿರುವುದು ಅಕ್ಷಮ್ಯ ಎಂದರು.
ಸರ್ಕಾರಿ ಸೇವೆಯಲ್ಲಿರುವ ವ್ಯಕ್ತಿಗಳು ತಮಗೆ ಬೇಕಾದಾಗ ಸ್ವಯಂ ನಿವೃತ್ತಿ ಪಡೆಯಲು ಕೇಂದ್ರ ಸರ್ಕಾರ ಕಾನೂನು ರೂಪಿಸಿದೆ. ಅದಕ್ಕೆ ಅನುಗುಣವಾಗಿ ಯಾವುದೇ ಸರ್ಕಾರಿ ಅಧಿಕಾರಿಯಾಗಿರಲಿ ಇಲ್ಲವೇ ನೌಕರನಾಗಿರಲಿ ಸ್ವಯಂ ನಿವೃತ್ತಿ ತೆಗೆದುಕೊಳ್ಳಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದರೆ ಅದಕ್ಕೆ ಸೂಕ್ತವಾಗಿ ಸ್ಪಂದಿಸುವುದು ಸರ್ಕಾರದ ಕರ್ತವ್ಯ. ಆದರೆ, ಬಿಜೆಪಿ ಸರ್ಕಾರ ಸ್ವಯಂ ನಿವೃತ್ತಿ ನೀಡದೆ ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡಿದೆ ಎಂದು ಗೌಡರು ಹರಿಹಾಯ್ದರು. ವೀರಭದ್ರಯ್ಯ ಅವರಿಂದ ವಿಅರ್ಎಸ್ ಕೊಡಿಸಿ ತುರುವೇಕೆರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಲು ಗೌಡರು ಲೆಕ್ಕಾಚಾರ ಹಾಕಿದ್ದರು.
(ದಟ್ಸ್ ಕನ್ನಡ ವಾರ್ತೆ)
ಉಪಚುನಾವಣೆ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ












Click it and Unblock the Notifications