ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಿನರ್ವಾ ವೃತ್ತದ ಬಳಿ 40 ಅಂಗಡಿ ಅಗ್ನಿಗಾಹುತಿ

By Staff
|
Google Oneindia Kannada News

ಬೆಂಗಳೂರು, ಡಿ 6 : ಮಿನರ್ವಾ ವೃತ್ತದ ಬಳಿ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಅಪಘಾತ ಸಂಭವಿಸಿ 30ರಿಂದ 40 ಅಂಗಡಿ ಮತ್ತು ಮನೆಗಳು ಅಗ್ನಿಗೆ ಆಹುತಿಯಾಗಿವೆ. ಅನಾಹುತಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.

ಜೆಸಿ ನಗರ ಸ್ಲಂನಲ್ಲಿ ಈ ಅನಾಹುತ ಸಂಭವಿಸಿದೆ. ಚಿಂದಿ ಬಟ್ಟೆ, ಪ್ಲಾಸ್ಟಿಕ್ ಸಾಮಾನುಗಳು, ಹಳೇ ಸ್ಟೀಲ್ ಸಾಮಗ್ರಿಗಳೇ ತುಂಬಿರುವ ಪ್ರದೇಶ ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿದೆ. ಪ್ಲಾಸ್ಟಿಕ್ ಮತ್ತು ಹಳೆ ಬಟ್ಟೆಗಳೇ ತುಂಬಿದ್ದರಿಂದ ಬೆಂಕಿ ಸುಲಭವಾಗಿ ಒಂದು ಅಂಗಡಿಯಿಂದ ಇನ್ನೊಂದು ಅಂಗಡಿಗೆ ಬೆಂಕಿ ಹಬ್ಬಿದೆ. ಮಧ್ಯಾಹ್ನ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿಶಾಮಕದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಆರು ವಾಹನಗಳು ಬಂದಿದ್ದರೂ ಬೆಂಕಿ ನಂದಿಸಲು ಅಗ್ನಿಶಾಮಕದಳದವರು ಹರಸಾಹಸಪಡಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಕಿಡಿಗೇಡಿಗಳು ಬೇಕಂತಲೇ ಬೆಂಕಿ ಹತ್ತಿಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಬೆಂಕಿ ಅನಾಹುತದಿಂದ ಆದ ನಷ್ಟದ ಪ್ರಮಾಣವೂ ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅನಾಹುತದಲ್ಲಿ ಯಾರಿಗೂ ಗಾಯವಾಗಿಲ್ಲ. ಮನೆಯಲ್ಲಿನ ಟಿವಿ, ಫ್ರಿಜ್ ಸೇರಿದಂತೆ ಎಲ್ಲ ವಸ್ತುಗಳೂ ಸುಟ್ಟು ಕರಕಲಾಗಿವೆ. ಆ ಪ್ರದೇಶದಲ್ಲಿ ಐವತ್ತು ಕುಟುಂಬಗಳು ನೆಲೆಸಿದ್ದು ಅನೇಕರು ನಿರಾಶ್ರಿತರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X