ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರುಣ್ ಸರೀನ್ ಯಾಹೂ ನೂತನ ಸಿಇಓ ?

By Staff
|
Google Oneindia Kannada News

ನ್ಯೂಯಾರ್ಕ್, ಡಿ. 9 : ವೊಡಾಫೋನ್ ಸಮೂಹದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಅರುಣ್ ಸರೀನ್ ಅಂತರ್ಜಾಲದ ಪ್ರಮುಖ ತಾಣಗಳಲ್ಲಿ ಒಂದಾದ ಯಾಹೂ.ಕಾಂ ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗುವ ಸಾಧ್ಯತೆಗಳಿವೆ.

ಯಾಹೂ ಕಾರ್ಯನಿರ್ವಾಹಕರಾಗಿದ್ದ ಜೆರ್ರಿ ಯಾಂಗ್ ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಾಹೂ ಆಡಳಿತ ಮಂಡಳಿ ಕಾರ್ಯ ನಿರ್ವಾಹಕ ಹುದ್ದೆಗೆ ಸೂಕ್ತ ವ್ಯಕ್ತಿಯ ಹುಟುಕಾಟ ನಡೆಸಿದ್ದರು. ಕಳೆದ ಜುಲೈ ತಿಂಗಳಲ್ಲಿ ವೋಡಾಫೋನ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ನಿವೃತ್ತರಾಗಿದ್ದ ಅರುಣ್ ಸರೀನ್ ಅವರಿಗೆ ಯಾಹೋ ಕಂಪನಿಯ ಆಡಳಿತ ಮಂಡಳಿ ಅಧಿಕೃತವಾಗಿ ಆಹ್ವಾನ ನೀಡಿದೆ ಎನ್ನಲಾಗಿದೆ. ಕಳೆದ ಐದು ವರ್ಷಗಳಿಂದ ವೋಡಾಫೋನ್ ಕಾರ್ಯನಿರ್ವಾಹಕ ಅಧಿಕಾರಿ ಸೇವೆ ಸಲ್ಲಿಸಿದ್ದ ಅರುಣ್ ಸರೀನ್ ಉತ್ತಮ ಅಧಿಕಾರಿ ಎಂದೇ ಗುರುತಿಸಿಕೊಂಡವರು.

ಯಾಹೂ.ಕಾಂ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಜೆರ್ರಿ ಯಾಂಗ್ ಮೈಕ್ರೋಸಾಫ್ಟ್ ಕಂಪನಿಯೊಂದಿಗೆ 47.5 ಬಿಲಿಯನ್ ಡಾಲರ್ ಮೊತ್ತದ ಒಡಂಬಡಿಕೆಗೆ ಒಪ್ಪಂದ ಮಾಡಿಕೊಂಡು ತೀವ್ರ ಟೀಕಿಗೆ ಗುರಿಯಾಗಿದ್ದರಿಂದ ಯಾಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X