ಬಿಜಾಪುರ ಬಂದ್ ಗೆ ವ್ಯಾಪಕ ಬೆಂಬಲ

ಬಿಜಾಪುರ, ಡಿ. 10 : ನಗರದಲ್ಲಿ ಎರಡು ಪಾಕಿಸ್ತಾನದ ಧ್ವಜ ಹಾರಾಟ ಖಂಡಿಸಿ ಇಂದು ಹಿಂದುಪರ ಸಂಘಟನೆಗಳು ನೀಡಿರುವ ಬಂದ್ ಕೆರಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಸ್ತೆ ಸಂಚಾರ ನಿಷೇಧಿಸಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿರುವ ನ್ಯಾಯವಾದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ನಗರದ ಗಾಂಧಿ ಚೌಕ್ ಬಳಿ ಟೈರ್ ಗೆ ಬೆಂಕಿ ಹಚ್ಚಿದ ಶ್ರೀರಾಮಸೇನೆ ಕಾರ್ಯಕರ್ತರು ಪಾಕಿಸ್ತಾನದ ಧ್ವಜವನ್ನು ಹಾರಿಸಿದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿಬೇಕೆಂದು ಆಗ್ರಹಿಸಿದ್ದಾರೆ. ಪ್ರತಿಭಟನಾನಿತರ ಆಕ್ರೋಶದಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಚಾಗಿತ್ತು. ಸಿದ್ದೇಶ್ವರ ದೇವಸ್ಥಾನದ ಬಳಿ ಎರಡು ಕೋಮುಗಳ ನಡುವೆ ಮಾತಿನ ಚಕಮಕಿ, ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಈ ಮಧ್ಯೆ ಯಾವುದೇ ಅಹಿತಕರ ಘಟನೆ ನಡೆದರೆ ನಗರ ಸಭೆ ಸದಸ್ಯರೇ ಹೊಣೆ ಎಂದು ಜಿಲ್ಲಾ ವರಿಷ್ಠಾಧಿಕಾರಿ 12 ನಗರ ಸಭೆಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ವ್ಯಾಪಕ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಪೊಲೀಸರನ್ನು ನಿಯೋಜಿಲಾಗಿದೆ. ಪಾಕ್ ಧ್ವಜ ಹಾರಾಟ ಖಂಡಿಸಿ ಸಾರ್ವಜನಿಕರು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಶಾಲಾ ಕಾಲೇಜುಗಳು ರಜೆ ಘೋಷಿಸಿವೆ. ನ್ಯಾಯಾವಾದಿಗಳು ಕೂಡಾ ನ್ಯಾಯಾಲಯದ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇಂದು ಮಧ್ಯಾಹ್ನ ಬಹಿರಂಗ ಸಮಾವೇಶ ನಡೆಯಲಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಕಳೆದ 7 ರಂದು ನಗರದ ಟಿಪ್ಪು ವೃತ್ತ ಮತ್ತು ಮನಗೂಲಿ ವೃತ್ತದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಹಿಂದುಪರ ಸಂಘಟನೆಗಳು ದೇಶದ್ರೋಹ ಕೃತ್ಯ ಎಸಗಿರುವವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+