ಸರ್ಕಾರಿ ಯಂತ್ರದ ದುರುಪಯೋಗ ಸಾಧ್ಯತೆ, ಎಚ್ಡಿಕೆ
ಮೈಸೂರು, ಡಿ. 10 : ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಸರ್ಕಾರದ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ, ಈ ಹಿನ್ನೆಲೆಯಲ್ಲಿ ಸರ್ಕಾರಿ ಯಂತ್ರದ ಮೇಲೆ ತೀವ್ರ ನಿಗಾ ಇರಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಅವರು ಎಚ್ಚರಿಕೆ ನೀಡಿದರು.
ಡಿ. 27 ರಂದು ರಾಜ್ಯ ಎಂಟು ಕ್ಷೇತ್ರಗಳಲ್ಲಿ ನಡೆಯಲಿರುವ ಪಾರದರ್ಶಕವಾಗಿ ನಡೆಯುತ್ತವೆ ಎನ್ನವುದಕ್ಕೆ ಯಾವ ಗ್ಯಾರಂಟಿಯೂ ಇಲ್ಲ. ಅದಕ್ಕೆ ಅನೇಕ ಕಾರಣಗಳಿವೆ. ಉದಾಹರಣೆಯಾಗಿ ಹೇಳುವುದಾದರೆ ಮದ್ದೂರು ಕ್ಷೇತ್ರವನ್ನೆ ತೆಗೆದುಕೊಳ್ಳಿ, ಅಲ್ಲಿ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಅವರು ಅಳಿಯ ಚುನಾವಣಾ ಅಧಿಕಾರಿಯಾಗಿದ್ದಾರೆ. ಸಚಿವರು ತಮ್ಮ ಪ್ರಭಾವಿ ಬೀರಿ ಅಕ್ರಮ ಚಟುವಟಿಗಳನ್ನು ನಡೆಸುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದು ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಎಂಟು ಕ್ಷೇತ್ರಗಳ ಉಪಚುನಾವಣೆ ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕೆಂದರೆ ರಾಜ್ಯ ಚುನಾವಣಾ ಆಯೋಗ ವಿಶೇಷ ಅಧಿಕಾರಿಯನ್ನು ನೇಮಿಸಬೇಕು. ಸರ್ಕಾರಿ ಯಂತ್ರವನ್ನು ಬಿಜೆಪಿ ತಮ್ಮ ಪ್ರಭಾವಿ ಬೀರಿ ಬಳಸಿಕೊಳ್ಳುವುದನ್ನು ತಡೆಯಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು. ಇದಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದಿಂದ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಕುರುಬರಿಗಾಗಿ ಸಿದ್ದು ಬಿಜೆಪಿ ಜೊತೆ ಮೈತ್ರಿ












Click it and Unblock the Notifications