ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ 65 ಕೋಟಿ ರು

ಧಾರವಾಡ, ಡಿ. 10 : ಅವಳಿ ನಗರಗಳ ರಸ್ತೆ ಸುಧಾರಣೆ, ಕೆರೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 65 ಕೋಟಿ ರುಪಾಯಿಗಳ ವೆಚ್ಚದ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಭಯೋತ್ಪಾಕರ ಹಾವಳಿ ಹೆಚ್ಚಿದ ಹಿನ್ನೆಲೆಯಲ್ಲಿ ಅವಳಿ ನಗರಗಳಲ್ಲಿ ಸೂಕ್ತ ಭದ್ರತೆಗೆ ಕ್ರಮಕೈಗೊಳ್ಳಲಾಗುವುದು ಎಂದರು. ಒಂದು ವಾರದ ಒಳಗೆ ನೂತನ ಕೈಗಾರಿಕೆ ಮತ್ತು ಗಣಿ ನೀತಿಯನ್ನು ಜಾರಿಗೆ ತರಲಾಗುವುದು. ಡಿಸೆಂಬರ್ ಅಂತ್ಯದ ವೇಳೆಗೆ ಜವಳಿ ಉದ್ಯಮಕ್ಕೆ ನೂತನ ನೀತಿ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ನಿರಾಣಿ ಹೇಳಿದರು.

ಅವಳಿ ನಗರದ ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿ 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಹಾಗೆಯೇ ರಸ್ತೆ ಸುಧಾರಣ ಮತ್ತು ಕೆರೆ ಅಭಿವೃದ್ಧಿಗೆ ಕಾಮಗಾರಿಗಳಿಗೆ ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ನಿರಾಣಿ ಸ್ಪಷ್ಟಪಡಿಸಿದರು. ಅವಳಿ ನಗರಗಳಲ್ಲಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ವ್ಯವಸ್ಥಿತವಾದ ಜಾಲ ಇಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಈಗಾಗಲೇ ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಅನೇಕರನ್ನು ಬಂಧಿಸಲಾಗಿದೆ. ಈ ಬಗ್ಗೆ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಕ್ರಮಕೈಗೊಳ್ಳು ನಿಟ್ಟಿನಲ್ಲಿ ಇರಿಸಲಿದೆ ಎಂದು ಮುರುಗೇಶ ನಿರಾಣಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+