ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ. 21 ರಂದು ಪಲ್ಸ್ ಪೋಲಿಯೋ ಲಸಿಕೆ

By Staff
|
Google Oneindia Kannada News

ಬೆಂಗಳೂರು, ಡಿ. 11 : ಬೆಂಗಳೂರು ನಗರ ಜಿಲ್ಲೆಯಲ್ಲಿ ಡಿಸೆಂಬರ್ 21 ರಂದು ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎಲ್ಲಾ ಅಧಿಕಾರಿಗಳು ಅದರಲ್ಲೂ ಪ್ರಮುಖವಾಗಿ ಆರೋಗ್ಯ, ಶಿಕ್ಷಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎನ್. ನಾಯಕ್ ಅವರು ಇಲ್ಲಿ ಇಂದು ಸೂಚಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮದ ಅನುಷ್ಠಾನ ಕುರಿತು ಏರ್ಪಡಿಸಿದ ಜಿಲ್ಲಾ ಸಮನ್ವಯ ಸಮಿತಿಯ ಪೂರ್ವಭಾವಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಈ ಬಾರಿ ಒಟ್ಟಾರೆ 4,59,294 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು ಅದಕ್ಕಾಗಿ 1684 ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟಾರೆ 6600 ಸಿಬ್ಬಂದಿಯನ್ನು ಲಸಿಕೆ ನೀಡುವ ಕಾರ್ಯಕ್ಕೆ ನೇಮಕ ಮಾಡಿದ್ದು, 330 ಅಧಿಕಾರಿಗಳನ್ನು ಮೇಲ್ವಿಚಾರಣೆಗೆ ನೇಮಕ ಮಾಡಲಾಗಿದೆ. ಇದಲ್ಲದೆ 1483 ಸ್ಥಿರ ಕೇಂದ್ರಗಳನ್ನು, 169 ಸಂಚಾರಿ ವಾಹನ ತಂಡ ಹಾಗೂ 161 ನಡೆದಾಡುವ ಸಂಚಾರಿ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಸಭೆಗೆ ತಿಳಿಸಿದರು.

ಈ ಹಿಂದೆ ಎಷ್ಟು ಬಾರಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ ಐದು ವರ್ಷದೊಳಗಿನ ಮಕ್ಕಳಿಗೆ ಈ ಬಾರಿಯೂ ಲಸಿಕೆ ಹಾಕಿಸುವಂತೆ ತಂದೆ ತಾಯಿಗಳಲ್ಲಿ ಮನವಿ ಮಾಡಿದ ಜಿಲ್ಲಾಧಿಕಾರಿ ಜಿ.ಎನ್. ನಾಯಕ್ ಅವರು ಶಾಲೆಗಳಲ್ಲಿ ಮಕ್ಕಳಿಗೆ, ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಮಾಜ ಸೇವಕರು ಸ್ತ್ರೀ ಶಕ್ತಿ ಸಂಘಗಳ ಪ್ರತಿನಿಧಿಗಳಿಗೆ ಲಸಿಕೆ ಹಾಕುವ ಬಗ್ಗೆ ಮೊದಲೆ ತಿಳಿಸಿ ವಾರ್ಡುಗಳಲ್ಲಿ, ಗ್ರಾಮೀಣ ಪ್ರದೇಶಗಳಲ್ಲಿ ಜಾಥಾ ಏರ್ಪಡಿಸಿ ಅತೀ ಹೆಚ್ಚು ಪ್ರಚಾರವಾಗುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X