ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಂಗ್ ಇದ್ದ ಯಾಹೂ ಯಂಗ್ ಆಗೋಯ್ತು

By Staff
|
Google Oneindia Kannada News

ಬೆಂಗಳೂರು, ಡಿ. 11 :ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಟರ್ನೆಟ್ ದೈತ್ಯ ಯಾಹೂ ಕಂಪನಿಯ ನೌಕರರು 'ಯಾಹೂ' ಅನ್ನುತ್ತಿಲ್ಲ. ಆರ್ಥಿಕ ಬಿಕ್ಕಟ್ಟಿನ ಬಿಸಿಯಿಂದಾಗಿ ಅನೇಕ ನೌಕರರಿಗೆ ಕೆಲಸ ಕಳೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಉತ್ತಮ ಕಾರ್ಯಕ್ಷಮತೆ ತೋರಿಸದ ಶೇ. 3ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ಯಾಹೂ ನಿರ್ಧರಿಸಿದೆ ಎನ್ನಲಾಗಿದೆ. ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 2 ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ. ಕೆಲಸ ಕಳೆದುಕೊಳ್ಳುವ ನೌಕರರು ಉತ್ತಮ ಕಾರ್ಯಕ್ಷಮತೆಯನ್ನು ತೋರಿಸಲು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಪನಿಯ ಮುಖ್ಯಸ್ಥರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು ಯಾಹೂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಜೆರ್ರಿ ಯಾಂಗ್ ಮೈಕ್ರೋಸಾಫ್ಟ್ ಕಂಪನಿಯೊಂದಿಗೆ ಮಾಡಿಕೊಂಡ ಒಪ್ಪಂದಕ್ಕೆ ವ್ಯಾಪಕ ಟೀಕೆಗಳು ಕೇಳಿಬಂದಿದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀರಾಮೆ ನೀಡಿದ್ದರು. ಅ ಸ್ಥಾನಕ್ಕೆ ವೋಡಾಫೋನ್ ಕಂಪನಿಯ ಮಾಜಿ ಸಿಇಓ ಅರುಣ್ ಸರೀನ್ ನೇಮಕವಾಗುತ್ತಾರೆ ಎನ್ನುವ ಸುದ್ದಿ ದಟ್ಟವಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಅರುಣ್ ಸರೀನ್ ಯಾಹೂ ನೂತನ ಸಿಇಓ ?

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X