ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚು. ಆಯೋಗದ ಮೇಲೆ ಕುಮಾರ ಕೆಂಗಣ್ಣು

By Staff
|
Google Oneindia Kannada News

ಮಧುಗಿರಿ, ಡಿ. 12 : ಮಧುಗಿರಿ ಕ್ಷೇತ್ರದ ಜನತೆ ಮರುಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಆರಿಸಿ ತರಲು ತೀರ್ಮಾನಿಸಿದ್ದಾರೆ. ಬಿಜೆಪಿ ಪಕ್ಷದ ಅಬ್ಬರ, ದೌರ್ಜನ್ಯ, ಹಣಬಲ, ಅಧಿಕಾರ ದುರುಪಯೋಗ ಮಾಡಿಕೊಳ್ಳುವುದಕ್ಕೆ ಈ ಚುನಾವಣೆಯಲ್ಲಿ ಮತದಾರರು ಸರಿಯಾಗಿ ಪಾಠ ಕಲಿಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಮಧುಗಿರಿ ಕ್ಷೇತ್ರದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಪ್ರಜಾಪ್ರಭುತ್ವ ಬುಡಮೇಲು ಮಾಡುವ ಕೃತ್ಯದಲ್ಲಿ ತೊಡಗಿದ್ದಾರೆ. ಕಂತೆ ಕಂತೆ ಹಣವನ್ನು ಮತದಾರರಿಗೆ ಹಂಚುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯ ಚುನಾವಣೆ ಆಯೋಗ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ಟೀಕಿಸಿದ ಕುಮಾರಸ್ವಾಮಿ, ರಾತ್ರಿ ಹತ್ತರ ನಂತರ ಮತದಾರರರಿಗೆ ಕೈಮುಗಿಯಲು ಅವಕಾಶ ಮಾಡಿಕೊಡದ ಆಯೋಗ, ಪ್ರಚಾರ ಕಾರ್ಯಕ್ಕೆ ಅಡ್ಡಿ ಉಂಟು ಮಾಡುತ್ತಿದೆ ಎಂದು ಆರೋಪಿಸಿದರು. ಆದರೆ, ಅದೇ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಮಧುಗಿರಿ, ದೇವದುರ್ಗ ಮತ್ತು ಹುಕ್ಕೇರಿಗಳಲ್ಲಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೂ ಕ್ಯಾರೇ ಎನ್ನದ ಆಯೋಗ, ಮಧುಗಿರಿಯಲ್ಲಿ ಮಾತ್ರ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ ಎಂದು ಕಿಡಿಕಾರಿದರು. ಆಯೋಗ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ಮೆಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅವರು ಟೀಕಿಸಿದರು.

ಮಧುಗಿರಿ ಜೆಡಿಎಸ್ ಪಕ್ಷದ ಪ್ರತಿಷ್ಠೆಯ ಪ್ರಶ್ನೆಯೇ ಅಲ್ಲ. ಮಧುಗಿರಿಯಲ್ಲಿ ಜೆಡಿಎಸ್ ಜಯಭೇರಿ ಬಾರಿಸಲಿದೆ ಎನ್ನುವ ವಿಶ್ವಾಸವಿದೆ. ಅದಕ್ಕಾಗಿ ಇಲ್ಲಿ ಎರಡು ದಿನ ಚುನಾವಣೆ ಪ್ರಚಾರ ನಡೆಸುವೆ ಎಂದು ಕುಮಾರಸ್ವಾಮಿ ಹೇಳಿದರು. ದೇವದುರ್ಗ, ಹುಕ್ಕೇರಿ, ಕಾರವಾರ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯಕ್ಕೆ ತೆರಳುವುದಾಗಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಮದ್ದೂರಿನ ದುಡ್ಡು,ದೊಡ್ಡಬಳ್ಳಾಪುರದ ಲೆಕ್ಕ
ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತನ್ನಿ
ಸರ್ಕಾರಿ ಯಂತ್ರದ ದುರುಪಯೋಗ ಸಾಧ್ಯತೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X