ಸಾರಿಗೆ ಸಂಸ್ಥೆ ನೌಕರರಿಗೆ ಶೇ.6 ರಷ್ಟು ವೇತನ ಹೆಚ್ಚಳ

ಬೆಂಗಳೂರು, ಡಿ.13: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೇರಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯ ಎಲ್ಲ ವರ್ಗದ ನೌಕರರಿಗೆ ಶೇ.6ರಷ್ಟು ವೇತನ ಹೆಚ್ಚಿಸಲಾಗಿದೆ. ವೇತನ ಪರಿಷ್ಕರಣೆ ಏ.1ರಿಂದ ಪೂರ್ವಾನ್ವಯವಾಗಲಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಯ ಸುಮಾರು 1 ಲಕ್ಷ ನೌಕರರಿಗೆ ವೇತನ ಹೆಚ್ಚಲಿದ್ದು ಸಾರಿಗೆ ಸಂಸ್ಥೆಗೆ 396 ಕೋಟಿ ರು. ಹೆಚ್ಚುವರಿ ಹೊರೆಯಾಗಲಿದೆ ಎಂದು ಅಶೋಕ್ ತಿಳಿಸಿದರು. ನೌಕರರ ವೇತನ ಪರಿಷ್ಕರಿಸುವ ಪ್ರಸ್ತಾವನೆಗೆ ಮಂಡಳಿ ಸಭೆ ಒಪ್ಪಿಗೆ ನೀಡಿದೆ. ಇದರಿಂದ ವೇತನ ತಾರತಮ್ಯ ನಿವಾರಣೆಯಾಗಿದೆ. ಸಾರಿಗೆ ಸಂಸ್ಥೆಯ ನೌಕರರಿಗೆ ಕನಿಷ್ಠ ವೇತನ ನೀಡಲಾಗುತ್ತಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಡೀಸೆಲ್ ಮೇಲಿನ ದರ ಇಳಿಸಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಬಸ್ಸುಗಳ ಪ್ರಯಾಣ ದರ ಇಳಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+