ಬೆಳಗಾವಿ, ಜೆಡಿಎಸ್ ನ 20 ಲಕ್ಷ ವಶ, 3 ಬಂಧನ
ಬೆಳಗಾವಿ, ಡಿ. 15 : ಮತದಾರರರಿಗೆ ಹಂಚಲು ತೆಗೆದುಕೊಂಡು ಹೋಗಲಾಗುತ್ತಿದ್ದ ಸುಮಾರು 20 ಲಕ್ಷ ರುಪಾಯಿ ಹಾಗೂ ಒಂದು ಸ್ಕಾರ್ಪಿಯೋ ಕಾರನ್ನು ವಶಪಡಿಸಿಕೊಂಡಿರುವ ಎಪಿಎಂಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಚರಣೆ ನಡೆಸಿದ ನಗರದ ಎಪಿಎಂಸಿ ಪೊಲೀಸರು ಹುಕ್ಕೇರಿ ಜೆಡಿಎಸ್ ಅಭ್ಯರ್ಥಿ ಸಹೋದರ ಸೇರಿ ಒಟ್ಟು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಸದಾಶಿವನಗರ ಮನೆಯಿಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಾಗೂ ಅರಭಾವಿ ಕ್ಷೇತ್ರದಲ್ಲಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಹಣ ಜೆಡಿಎಸ್ ಪಕ್ಷದ ಹುಕ್ಕೇರಿ ಅಭ್ಯರ್ಥಿ ಮಠಗಾರ್ ಹಾಗೂ ಅರಭಾವಿ ಕ್ಷೇತ್ರದ ಅಭ್ಯರ್ಥಿ ಅರವಿಂದ ದಳವಾಯಿ ಅವರಿದೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಷೇತ್ರದ ಮತದಾರರಿಗೆ ಹಂಚಲು ಹಣ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ವಿಚಾರಣೆ ನಂತರ ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಹಣ ಯಾರಿಗೆ ಸೇರಿದ್ದು, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬುದನ್ನು ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲು ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications