ಬೆಳಗಾವಿಯಲ್ಲಿ ಅಂಗವಿಕಲರ ಕ್ರೀಡಾಕೂಟ ಆರಂಭ

ಬೆಳಗಾವಿ, ಡಿ. 16 : ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಇಂದು (ಡಿಸೆಂಬರ್ 16 ರಂದು) ಅಂಗವಿಕಲರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಡಿಸೆಂಬರ್ 17 ರಂದು ವಿಶ್ವ ಅಂಗವಿಕಲರ ದಿನಾಚರಣೆಯ ಉದ್ಘಾಟನಾ ಸಮಾರಂಭ ನಗರದಲ್ಲಿ ನಡೆಯಲಿದೆ.

ವಿಶ್ವ ಅಂಗವಿಕಲರ ದಿನಾಚರಣೆಯ ಅಂಗವಾಗಿ ಸಾಧನೆ ಮತ್ತು ಪ್ರತಿಭೆ ಯೋಜನೆಯಡಿಯಲ್ಲಿ ಏರ್ಪಡಿಸಲಾದ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಿಯಾ ನಾರಂಗ ಉದ್ಘಾಟಿಸಿದರು. ಬೆಳಗಾವಿ ಫಿಜಿಕಲ್ ಹ್ಯಾಂಡಿಕ್ರಾಪ್ಟ್ ಅಸೋಸಿಯೇಶನ್ ಕಾರ್ಯದರ್ಶಿ ಅಶೋಕ ಬಾಂದಿವಾಡಕರ ಅಧ್ಯಕ್ಷತೆ ವಹಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಮತ್ತು ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಅಶೋಕ ಮುರಗೋಡ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಡಿಸೆಂಬರ್ 17 ರಂದು ಬೆಳಿಗ್ಗೆ 10.30 ಗಂಟೆಗೆ ನೆಹರು ನಗರದಲ್ಲಿರುವ ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಜಿಲ್ಲಾಧಿಕಾರಿ ಡಾ ಜೆ. ರವಿಶಂಕರ ಉದ್ಘಾಟಿಸುವರು. ಬೆಳಗಾವಿ ಜಿಲ್ಲಾ ಅಂಧರ ಸೇವಾ ಸಂಸ್ಥೆಯ ಅಧ್ಯಕ್ಷರಾದ ಡಾ ವಿಜಯ ಗ್ರಾಮೋಪಾಧ್ಯೆ ಅಧ್ಯಕ್ಷತೆ ವಹಿಸುವರು. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ ಎಂ.ಆರ್. ಚಂದ್ರಶೇಖರ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

ಈ ಕಾರ್ಯಕ್ರಮವು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಹಾಗೂ ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಳಗಾವಿ ಇವರುಗಳ ಸಂಯುಕ್ತ ಅಶ್ರಯದಲ್ಲಿ ಏರ್ಪಡಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+