ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ. 2ನೇ ವಾರದಲ್ಲಿ ವಿಧಾನಮಂಡಲ ಅಧಿವೇಶನ

By Staff
|
Google Oneindia Kannada News

ಬೆಂಗಳೂರು, ಡಿ. 16 : ವಿಧಾನಮಂಡಲದ ವಿಶೇಷ ಅಧಿವೇಶನವನ್ನು ಜನವರಿ ಎರಡನೇ ವಾರದಲ್ಲಿ ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಡಾ. ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಕರ್ನಾಟಕ ವಿಧಾನಮಂಡಲಕ್ಕೆ ಮೊದಲ ಬಾರಿಗೆ ಅಯ್ಕೆಯಾಗಿರುವ ಸದಸ್ಯರಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ಕಾಲದ ಪ್ರಶಿಕ್ಷಣ ಶಿಬಿರದ ಸಮಾರೋಪದಲ್ಲಿ ಸೋಮವಾರ ಅವರು ಈ ವಿಷಯ ತಿಳಿಸಿದರು. ಅಧಿವೇಶನವನ್ನು ಎಷ್ಟು ದಿನ ನಡೆಸಬೇಕು ಎನ್ನುವ ಬಗ್ಗೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಆ ಬಳಿಕ ಶೀಘ್ರದಲ್ಲಿಯೇ ಅಧಿವೇಶನದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದರು. ನಿರೀಕ್ಷಿತ ರಾಜಕೀಯ ಬೆಳವಣಿಗೆಗಳಿಂದಾಗಿ ಬೆಳಗಾವಿಯಲ್ಲಿ ಮತ್ತೆ ಅಧಿವೇಶನ ನಡೆದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X