ಕಾಂಗ್ರೆಸ್ ಅಭ್ಯರ್ಥಿಯನ್ನೇ ನಿವೃತ್ತಿಗೊಳಿಸಿ, ಗಾಂವ್ಕರ್

ಕಾರವಾರ, ಡಿ. 17 : ಪಕ್ಷಾಂತರ ಮಾಡಿ ಸಚಿವ ಸ್ಥಾನ ಗಿಟ್ಟಿಸಿರುವ ಆನಂದ ಅಸ್ನೋಟಿಕರ್ ಅವರನ್ನು ಸೋಲಿಸುವ ಗುರಿಯನ್ನು ಕಾಂಗ್ರೆಸ್ ಮುಖಂಡರು ಹೊಂದಿದ್ದರೆ ಕೂಡಲೇ ಕಾರವಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸತೀಶ್ ಸೈಲ್ ಅವರನ್ನು ಕಣದಿಂದ ನಿವೃತ್ತಿಯಾಗುವಂತೆ ಸೂಚನೆ ನೀಡಲಿ ಎಂದು ಕಾರವಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದೇವಿದಾಸ್ ಗಾಂವ್ಕರ್ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರಿಗೆ ಸವಾಲು ಹಾಕಿದ್ದಾರೆ.

ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಎಸ್ ಬಂಗಾರಪ್ಪ ಮೂಲಕ ಕಾರವಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಕಣದಿಂದ ನಿವೃತ್ತಿಯಾಗುವಂತೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮೇಲೆ ಒತ್ತಡ ಹಾಕಿದ್ದಾರೆ ಎನ್ನುವ ಸುದ್ದಿಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ಅವರಿಗೆ ಅಸ್ನೋಟಿಕರ್ ಅವರನ್ನು ಸೋಲಿಸಲೇಬೇಕು ಎಂಬ ಏಕೈಕ ಗುರಿ ಇದ್ದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ನಿವೃತ್ತಿಗೊಳಿಸಿ, ಜೆಡಿಎಸ್ ಗೆ ಬೆಂಬಲ ನೀಡಲಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.

ಒಂದು ಕಾಲದಲ್ಲಿ ದೇಶಪಾಂಡೆ ಅವರ ಶಿಷ್ಯರಾಗಿದ್ದ ಅನಂದ ಅಸ್ನೋಟಿಕರ್ ಇಂದು ಬಿಜೆಪಿ ಸರ್ಕಾರದ ಸಂಪುಟ ದರ್ಜೆಯ ಸಚಿವರಾಗಿದ್ದಾರೆ. ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅನಂದ್ ಬಿಜೆಪಿ ಸೇರಿದರು. ಇದು ದೇಶಪಾಂಡೆ ಸೇರಿ ಕಾಂಗ್ರೆಸ್ ನಾಯಕರಲ್ಲಿ ತೀವ್ರ ಅಸಮಾಧಾನ ಹುಟ್ಟುಹಾಕಿತ್ತು. ಅನಂದ್ ಮುಖಕ್ಕೆ ಬಸಿ ಬಳಿಯುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ಭಾರಿ ಸಾಹಸವನ್ನೇ ಮಾಡಿದರು. ಕಳೆದ ವಿಧಾನಸಭೆ ಚುನಾವಣಾ ವೇಳೆಯಲ್ಲಿ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾನೆ ಎಂದು ತೀವ್ರ ಗೊಂದಲವನ್ನು ಹುಟ್ಟಿಹಾಕಿರುವುದು ತಿಳಿದಿರುವ ಸಂಗತಿ.

(ದಟ್ಸ್ ಕನ್ನಡ ವಾರ್ತೆ)
ಕಾಂಗ್ರೆಸ್ಸಿನಿಂದ ಶುಭಲತಾ ಅಸ್ನೋಟಿಕರ್ ಔಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+