ಕಾಂಗ್ರೆಸ್ಸಿನ ಶುಭಲತಾ ಅಸ್ನೋಟಿಕರ್ ಔಟ್
ಬೆಂಗಳೂರು, ಡಿ. 17 : ಪಕ್ಷದ ಶಿಸ್ತು ಉಲ್ಲಂಘನೆ ಆರೋಪದಡಿ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ಹೊರಹಾಕಲಾಗಿದೆ. ಕಾಂಗ್ರೆಸ್ ಶಾಸಕಾಂಗ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು, ಈ ಸಂಬಂಧ ಶುಭಲತಾ ಅವರಿಗೆ ನೋಟಿಸ್ ನೀಡಿದ್ದು, ಏಳು ದಿನಗಳ ಒಳಗೆ ಸಮಜಾಯಿಷಿ ನೀಡುವಂತೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶುಭಲತಾ, ಕಾರವಾರ ಕ್ಷೇತ್ರದ ಮರುಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆವರ ಪುತ್ರ ಸಚಿವ ಆನಂದ ಅಸ್ನೋಟಿಕರ್ ಬಿಜೆಪಿ ಅಭ್ಯರ್ಥಿಯಾಗುತ್ತಿದ್ದಂತೆಯೇ ನಾಮಪತ್ರ ಹಿಂಗೆತೆದುಕೊಂಡಿದ್ದರು. ಅವರನ್ನು ಅಮಾನತು ಮಾಡಲು ಇಷ್ಟು ಸಾಕಾಯಿತು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಮರುಚುನಾವಣೆಯಲ್ಲಿ ಮತ್ತೆ ಬಿಜೆಪಿ ಪ್ರಾಬಲ್ಯ ?












Click it and Unblock the Notifications