ಉಪಚುನಾವಣೆ ನಂತರ ಬಸ್ ದರ ಇಳಿಕೆ

ಬೆಂಗಳೂರು, ಡಿ. 18 : ಇಂಧನ ಬೆಲೆ ಕುಸಿದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಉಪಚುನಾವಣೆಯ ನಂತರ ಬಸ್ ದರವನ್ನು ಇಳಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಾ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಣನೀಯವಾಗಿ ಕುಸಿದಿದೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಕೇಂದ್ರ ಸರ್ಕಾರ ಇನ್ನಷ್ಟು ಇಳಿಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಪ್ರಯಾಣ ದರವನ್ನು ಇಳಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಇತ್ತೀಚೆಗೆ ಸಾರಿಗೆ ಸಚಿವ ಆರ್ ಅಶೋಕ್ ಬಸ್ ದರ ಇಳಿಕೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಬೆಲೆ ಇಳಿಕೆ ಬಗ್ಗೆ ಮಾತನಾಡಿದ್ದು, ಉಪಚುನಾವಣೆ ನಂತರ ಇಳಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸದ್ಯ ಉಪಚುನಾವಣೆಗಳು ನಡೆಯಬೇಕಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಈಗ ಬಸ್ ದರ ಇಳಿಕೆ ಮಾಡಿದರೆ ನೀತಿ ಸಂಹಿತ ಉಲ್ಲಂಘನೆ ಮಾಡಿದ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ. ಆದ್ದರಿಂದ ಚುನಾವಣೆ ನಂತರ ಈ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಎರಡು ತಿಂಗಳ ಹಿಂದೆ ಸರ್ಕಾರ ಬಸ್ ಪ್ರಯಾಣ ದರ ಏರಿಸಿದ ಸರ್ಕಾರ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಆದರೆ, ಇಂಧನ ಬೆಲೆ ಮತ್ತು ನೌಕರರ ವೇತನ ಪರಿಷ್ಕರಣೆ ಮಾಡಿರುವುದರಿಂದ ಸಂಸ್ಥೆಗೆ ಆಗುವ ನಷ್ಟವನ್ನು ಸರಿದೂಗಿಸಲು ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಸಮರ್ಥಿಸಿಕೊಂಡಿತ್ತು. ಈಗ ಇಂಧನ ದರ ಇಳಿದಿರುವುದರಿಂದ ಜನರ ಒತ್ತಡಕ್ಕೆ ಮಣಿದು ಬಸ್ ದರ ಇಳಿಸುವುದು ಅನಿವಾರ್ಯವಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಸಾರಿಗೆ ಸಂಸ್ಥೆ ನೌಕರರಿಗೆ ಶೇ.6 ರಷ್ಟು ವೇತನ ಹೆಚ್ಚಳ
ಕೇವಲ ಒಂದು ರು.ಗೆ ವೋಲ್ವೊ ಬಸ್ ಪ್ರಯಾಣ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+