ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಟ್ಟೆ ನೋವು, ಸುಷ್ಮಾ ಸ್ವರಾಜ್ ಆಸ್ಪತ್ರೆಗೆ

By Staff
|
Google Oneindia Kannada News

ನವದೆಹಲಿ, ಡಿ. 19 : ತೀವ್ರವಾಗಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ನಗರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಗೆ ದಾಖಲಿಸಲಾಗಿದೆ. ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಸುಷ್ಮಾ ಸ್ವರಾಜ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಕ್ತದೊತ್ತಡ ಮತ್ತು ಮಧುಮೇಹ ರೋಗಗಳಿಂದ ಕರುಳಿಗೆ ಸಂಬಂಧಿಸಿದ ರೋಗ ಉಲ್ಭಣಿಸಿದ ಪರಿಣಾಮ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಡಾ ಎಸ್ ಸಿ ತಿವಾರಿ ಅವರು ಸುಷ್ಮಾ ಸ್ವರಾಜ್ ಅವರ ಆರೋಗ್ಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಕಳೆದ 10 ದಿನಗಳಿಂದ ಆಸ್ಪತ್ರೆಯಲ್ಲಿರುವ ಚಿಕಿತ್ಸೆ ಪಡೆಯುತ್ತಿದ್ದು, ರಕ್ತದೊತ್ತಡ ಹಾಗೂ ಮಧುಮೇಹವನ್ನು ಹತೋಟಿಗೆ ತರಲಾಗಿದೆ. ಸುಷ್ಮಾ ಅವರು ಶೀಘ್ರದಲ್ಲಿ ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ ಎಂದು ವೈದ್ಯರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X