ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನಸ್ಪಂದನ ಸಭೆಗೆ ಹಾಜರಾತಿ ಕಡ್ಡಾಯ: ಸುಧಾಕರ್ ರಾವ್

By Staff
|
Google Oneindia Kannada News

ಗುಲಬರ್ಗಾ, ಡಿ. 21 : ಶನಿವಾರಗಳಂದು ಹೋಬಳಿ ಮಟ್ಟದಲ್ಲಿ ನಡೆಯುವ ಜನಸ್ಪಂದನ ಸಭೆಯಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಖುದ್ದು ಹಾಜರಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರು ಹೇಳಿದರು.

ಗುಲಬರ್ಗಾ ತಾಲೂಕು ಫರಹತಾಬಾದ್ ಹೋಬಳಿಯಲ್ಲಿ ಶನಿವಾರ ಆಯೋಜಿಸಿದ್ದ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಕಚೇರಿಗೆ ಜನತೆ ಅಲೆಯುವುದನ್ನು ತಪ್ಪಿಸಲು ಸರ್ಕಾರ ಈ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಜನಸ್ಪಂದನೆಯ ಉದ್ದೇಶ ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ಬಂದು ಅವರಿಗೆ ಸಿಗಬೇಕಾದ ಸೌಲಭ್ಯ ದೊರೆಕಿಸಿಕೊಡುವುದಾಗಿದೆ. ಅಧಿಕಾರಿಗಳ ಹಾಜರಿಗೆ ಸಂಬಂಧಪಟ್ಟಂತೆ ಪರಿಶೀಲನಾ ಸಭೆ ನಡೆಸುವಂತೆ ಅವರು, ನಂತರ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜನಸ್ಪಂದನಾ ಕಾರ್ಯಕ್ರಮದಲ್ಲಿ ನೂರಾರು ಅರ್ಜಿಗಳ ವಿಲೇವಾರಿ ಆಗಿರುವುದು ತಂಬಾ ಸಂತೋಷವಾಗಿದೆ. ಬೀದರ್, ಗುಲಬರ್ಗಾ, ರಾಯಚೂರು ಜಿಲ್ಲೆಗಳು ಹಿಂದುಳಿದ ಜಿಲ್ಲೆಗಳೆಂದು ನಂಜುಂಡಪ್ಪ ವರದಿಯಲ್ಲಿ ಹೇಳಿದೆ. ಈ ಭಾಗದಲ್ಲಿ ಈಗ ಅಭಿವೃದ್ಧಿ ಕಾರ್ಯಗಳು ಆರಂಭವಾಗಿವೆ. ಅದಕ್ಕಾಗಿ ಸಾಕಷ್ಟು ಸಮಯಾವಕಾಶ ಬೇಕಾಗುತ್ತದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಗುಲಬರ್ಗಾ ಸಹಾಯಕ ಆಯುಕ್ತ ಡಾ. ಕೆ.ಜಿ.ಜಗದೀಶ್ ಅವರು, ಕಂದಾಯ ಇಲಾಖೆಗೆ ಸಂಬಂಧಿಸಿದ 459 ಅರ್ಜಿಗಳೂ ಬಂದಿದ್ದು, 304 ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಆರೋಗ್ಯ ಇಲಾಖೆಯ 4 ಅರ್ಜಿಗಳನ್ನು ಕೃಷಿ ಇಲಾಖೆಯ 40 ಅರ್ಜಿಗಳನ್ನು, ಗ್ರಾಮ ಪಂಚಾಯತಿಗೆ ಸಂಬಂಧಿಸಿದ 15 ಅರ್ಜಿಗಳನ್ನು ಹಾಗೂ ಶಿಶು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ 45 ಅರ್ಜಿಗಳನ್ನು ಪುರಸ್ಕರಿಸಿ ಸೌಲಭ್ಯಗಳನ್ನು ಮಂಜೂರು ಮಾಡಲಾಗಿದೆ. ಒಟ್ಟು 570 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 414 ಅರ್ಜಿಗಳ ಫಲಾನುಭವಿಗಳಿಗೆ ಸೌಲಭ್ಯ ಮಂಜೂರು ಮಾಡಲಾಗಿದ್ದು, ತಿರಸ್ಕೃತ ಅರ್ಜಿಗಳಿಗೆ ತಿರಸ್ಕರಿಸಲು ಇರುವ ಕಾರಣವನ್ನು ನೀಡಲಾಗಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)
ಗುಲಬರ್ಗಾ ತೊಗರಿ, ಕಡಲೆ ಶುಭವಾರ್ತೆ
ವಿದೇಶಿ ವಸ್ತು ತ್ಯಜಿಸಿ, ಸ್ವದೇಶಿ ಬಳಸಿ :ಶೋಭಾ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X