ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಲ್ಬರ್ಗಾ: ದಿಬ್ಬಣದ ಲಾರಿ ಪಲ್ಟಿ, 5 ಸಾವು

By Staff
|
Google Oneindia Kannada News

ಗುಲ್ಬರ್ಗಾ, ಡಿ. 22 : ದಿಬ್ಬಣಕ್ಕೆ ತೆರಳುತ್ತಿದ್ದ ಲಾರಿಯೊಂದು ಪಲ್ಟಿ ಹೊಡೆದಿದ್ದರಿಂದ ಸ್ಥಳದಲ್ಲಿ ಐವರು ಮೃತಪಟ್ಟು 35 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಭೀಕರ ಘಟನೆ ಚಿತ್ತಾಪುರ ಸಮೀಪದ ಕುಂಬಾರಹಳ್ಳಿ ಬಳಿ ಇರುವ ನಾಲ್ವಾರ್ ಕ್ರಾಸ್ ಬಳಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮೃತಪಟ್ಟ ಐದು ಮಂದಿ ಕೂಡ ನಂದೂರು ತಾಂಡಾದ ನಿವಾಸಿಗಳಾಗಿದ್ದಾರೆ. ಗಾಯಗೊಂಡರಲ್ಲಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿರುವ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಗುಲ್ಬರ್ಗಾ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಅಜಾಗರೂಕತೆಯೇ ಈ ದುರ್ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಂದೂರು ತಾಂಡಾದಿಂದ ದಿಗಲೂರು ತಾಂಡಾ ದಿಬ್ಬಣಕ್ಕೆ ತೆರಳುತ್ತಿತ್ತು. ಲಾರಿಯಲ್ಲಿ ಸುಮಾರು 200 ಜನರಿದ್ದರು ಎಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X