ಚೌರಾಸಿಯಾಗೆ ವಿರಾಸತ್ ಪ್ರಶಸ್ತಿ ಪ್ರದಾನ

ಮಿಜಾರಿನ ಶೋಭಾವನದ ತಪ್ಪಲಿನಲ್ಲಿ ನಡೆಯಲಿರುವ ಜನವರಿ 7 ರಂದು ಬುಧವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ವಿರಾಸತ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯೂ 50 ಸಾವಿರ ರುಪಾಯಿ ನಗದು, ಪ್ರಶಸ್ತಿ ಫಲಕಗಳನ್ನು ಹೊಂದಿರುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಯು ಮೋಹನ್ ಆಳ್ವ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಕಲಾ ಪ್ರೇಮಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸತತ 13 ವರ್ಷಗಳಿಂದ ವಿರಾಸತ್ ಕಾರ್ಯಕ್ರಮವನ್ನು ತುಂಬಾ ಅದ್ಧೂರಿಯಾಗಿ ನಡೆಸಿಕೊಂಡು ಬರುತ್ತಿದ್ದು, ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ವಾಟರ್ ಅಕ್ವೇರಿಯಂ ಹಾಗೂ ಫಲ ಪುಷ್ಪ ಪ್ರದರ್ಶನ ನಡೆಯಲಿದೆ. ಸುಮಾರು 1800 ವಿವಿಧ ಆಯುರ್ವೇದಿಕ್ ಗಿಡಮೂಲಿಕೆಗಳ ಸಂಗ್ರಹವಾಗಿರುವ ಶೋಭಾವನದ ವೀಕ್ಷಣೆಗೂ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಜನವರಿ 7 ರಿಂದ 12 ರ ವರೆಗೆ ಆರು ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿವೆ.
(ದಟ್ಸ್ ಕನ್ನಡ ವಾರ್ತೆ)
ಆಳ್ವಾಸ್ ನುಡಿಸಿರಿ ಸಂಭ್ರಮಕ್ಕೆ ವೇದಿಕೆ ಸಜ್ಜು












Click it and Unblock the Notifications