ಲೋಕಾಯುಕ್ತ ವರದಿ ಅಧ್ಯಯನಕ್ಕೆ ಸಮಿತಿ

ರಾಯಚೂರು, ಡಿ. 23 : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ನೀಡಿರುವ ವರದಿಯೇ ಅಂತಿಮ. ವರದಿ ಆಧಾರದ ಮೇಲೆ ಎರಡು ತಿಂಗಳೊಳಗೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ದೇವದುರ್ಗದಲ್ಲಿ ಸಚಿವ ಶಿವನಗೌಡ ನಾಯಕ ಪರ ಪ್ರಚಾರ ಕಾರ್ಯ ತೆರಳುವುದಕ್ಕೂ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿ ಪ್ರಕಾರ ಆರೋಪಿಗಳಿಗೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ಮೂವರು ಉನ್ನತ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಒಂದು ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿಯಲ್ಲಿ ಕಂಡು ಬಂದ ತಪ್ಪಿಸತ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಲ್ಲದೇ, ಎಚ್ ಡಿ ಕಮಾರಸ್ವಾಮಿ ಮುಖ್ಯಮಂತ್ರಿ ಅವಧಿಯಲ್ಲಿ ಕೂಡ ಅಕ್ರಮ ಗಣಿಗಾರಿಕೆಗೆ ಅನೇಕ ಪರವಾನಗಿ ನೀಡಲಾಗಿದೆ. ತಮಗೆ ಬೇಕಿರುವ ಶಾಸಕರಿಗೆ, ಸಂಬಂಧಿಗಳಿಗೆ ಅಕ್ರಮವಾಗಿ ಗಣಿಗಾರಿಕೆ ಪರವಾನಗಿ ನೀಡಲಾಗಿದೆ. ಅದರ ವಿರುದ್ಧವೂ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮವಾಗಿ ಗಣಿಗಾರಿಕೆ ಪರವಾನಗಿ ನೀಡಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿಗಳ ಹಣವನ್ನು ನಷ್ಟ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ, ಹಾಗೂ ನಷ್ಟವಾದಿ ಹಣವನ್ನು ವಸೂಲಿ ಮಾಡಿಕೊಳ್ಳಿ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಧರ್ಮಸಿಂಗ್ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+