ಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ

ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 'ಮುಂದೆ ಆಪರೇಷನ್ ಕಮಲವಾಗಲಿ, ಉಪ ಚುನಾವಣೆಗಳನ್ನು ನಡೆಸುವ ಪರಿಸ್ಥಿತಿ ಬರಬಾರದು' ಎಂದರು. ಈ ಉಪ ಚುನಾವಣೆಗಳ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ರಾಜ್ಯಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಆಗಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಪರ ಅಲೆ ಜೋರಾಗಿದ್ದು 8 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೋಲಿನ ಭೀತಿಯಿಂದ ಇಲ್ಲ ಸಲ್ಲದ ಆರೋಪ ಮಾಡುತ್ತಿವೆ. ಮತದಾರರು ಈ ಪಕ್ಷಗಳಿಗೆ ಉಪ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಮುಖ್ಯಮಂತ್ರಿಗಳು, ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬಳಿಕ ಸಚಿವ ಸಂಪುಟದಿಂದ ಕೈಬಿಟ್ಟ ಪಕ್ಷೇತರರಿಗೆ ಪುನಃ ಸಂಪುಟದಲ್ಲಿ ಸ್ಥಾನ ನೀಡಲಾಗುತ್ತದೆ ಎಂದು ತಿಳಿಸಿದರು. ಜ.16ರ ಬೆಳಗಾವಿ ಅಧಿವೇಶನದಲ್ಲಿ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಶೇ.90ರಷ್ಟನ್ನು ಈಡೇರಿಸಲಾಗಿದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ದೇಶಪಾಂಡೆ 0; ಗೌಡ 2; ಯಡ್ಡಿ 6
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications